ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದ ದುನಿಯಾ ವಿಜಯ್ ಅವರು ತಾಯಿಯ ಆರೋಗ್ಯ ಹದಗೆಟ್ಟಿದೆ. ನಮ್ಮಮ್ಮ ಕೊನೇ ಕ್ಷಣಗಳನ್ನು ಕಳೀತಿದ್ದಾರೆ ಎಂದು ದುನಿಯಾ ವಿಜಯ್ ತಿಳಿಸಿದ್ದಾರೆ.

ದುನಿಯಾ ವಿಜಯ್ ಅವರ ಅಮ್ಮ ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆದ ಕಾರಣ ಅವರ ಆರೋಗ್ಯ ತೀವ್ರ ಹದಗೆಟ್ಟಿದೆ. ಪ್ರತಿದಿನ ಮನೆಗೆ ಬಂದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ನಟ ವಿಜಯ್ ಅವರು ಕಳೆದ 20 ದಿನಗಳಿಂದ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ.

ದುನಿಯಾ ವಿಜಯ್ ಪೋಷಕರು ಕೆಲ ದಿನಗಳ ಹಿಂದಷ್ಟೇ ಕೋವಿಡ್​​ನಿಂದ ಚೇತರಿಸಿಕೊಂಡಿದ್ದರು. ಇನ್ನೇನು ಸಮಸ್ಯೆ ಬಗೆಹರಿಯಿತು ಎನ್ನುತ್ತಿರುವಾಗಲೇ ಮತ್ತೆ ತಾಯಿಯ ಆರೋಗ್ಯ ಹದಗೆಟ್ಟಿದೆ. ಅಮ್ಮನಿಗೆ ಆಸ್ಪತ್ರೆಗೆ ಹೋಗಲು ಇಷ್ಟವಿರಲಿಲ್ಲ. ಹೀಗಾಗಿ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿದ್ದೇನೆ. ತಾಯಿ ಮತ್ತೆ ಸಿಗಲ್ಲ, ಅವರು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಬೇಕು ಅನ್ನೋದಷ್ಟೇ ನನ್ನಾಸೆ. ದಿನಂಪ್ರತಿ ಅವರ ಆರೋಗ್ಯ ಹದಗೆಡುತ್ತಿದೆ ಆದರೆ ಮತ್ತೆ ಆರೋಗ್ಯ ಸರಿಯಾಗುತ್ತೆ ಎಂಬ ವಿಶ್ವಾಸವಿದೆ ಎಂದು ವಿಜಯ್ ತಿಳಿಸಿದ್ದಾರೆ.

The post ನಮ್ಮಮ್ಮ ಕೊನೇ ಕ್ಷಣಗಳನ್ನು ಕಳೀತಿದ್ದಾರೆ- ದುನಿಯಾ ವಿಜಯ್ appeared first on News First Kannada.

Source: newsfirstlive.com

Source link