ಬೆಂಗಳೂರು: ಪೆಟ್ರೋಲ್ ದರ ಏರಿಕೆ ಖಂಡಿಸಿ ಪ್ರತಿಭಟನೆಗೆ ಮುಂದಾಗಿದ್ದ ಕಾಂಗ್ರೆಸ್​ ನಾಯಕ ಮೊಹಮ್ಮದ್​ ನಲಪಾಡ್​ ಅವರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೊರೊನಾ ನಿಯಮ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಹಮ್ಮದ್ ನಲಪಾಡ್​ ಮತ್ತು ಅವರ ಜೊತೆಗಿದ್ದ ಐವರನ್ನ ಅಶೋಕನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರೆಲ್ಲಾ ಓಪೆರಾ ಜಂಕ್ಷನ್​ನಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾಗಿದ್ದರು.

ಸದ್ಯ ವಶಕ್ಕೆ ಪಡೆದಿರುವ ಪೊಲೀಸರು ನಲಪಾಡ್​ ವಿರುದ್ಧ ಎನ್​ಡಿಎಂಎ ಌಕ್ಟ್ ಅಡಿ ಪ್ರಕರಣ ದಾಖಲಿಸಿದ್ದಾರೆ. ನಂತರ ದಂಡ ಕಟ್ಟಿಸಿಕೊಂಡು ಪೊಲೀಸರು ಅವರನ್ನ ಬಿಟ್ಟು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ​

The post ನಲಪಾಡ್ ವಿರುದ್ಧ ಬಿತ್ತು NDMA ಕೇಸ್; ವಶಕ್ಕೆ ಪಡೆದು ಬಿಟ್ಟು ಕಳುಹಿಸಿದ ಪೊಲೀಸರು appeared first on News First Kannada.

Source: newsfirstlive.com

Source link