ನಾನು ಆರ್‌ಎಸ್‌ಎಸ್ ಬಗ್ಗೆ ಹೊಗಳಿದ್ದೇನೆ ಎನ್ನುವುದು ಸುಳ್ಳು- ಹೆಚ್. ಡಿ. ದೇವೇಗೌಡ

ಬೆಂಗಳೂರು: ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್​ಡಿ ದೇವೇಗೌಡರು ನಾನು ಆರ್‌ಎಸ್‌ಎಸ್ ಬಗ್ಗೆ ಹೊಗಳಿದ್ದೇನೆ ಎನ್ನುವುದು ಸುಳ್ಳು.. ಸುಳ್ಳು ಹೇಳುವುದಕ್ಕೂ ಒಂದು ಮಿತಿ ಇರಬೇಕು ಎಂದಿದ್ದಾರೆ.

ಇದನ್ನೂ ಓದಿ: ʼಅನೈತಿಕ-ನಿರ್ಲಜ್ಜ-ನೀಚʼ ರಾಜಕಾರಣ RSSನಲ್ಲೇ ಕಲಿಸಲಾಯಿತಾ..? C.T ರವಿಗೆ HDK ಟಾಂಗ್

ಆರ್.ಎಸ್.ಎಸ್ ಬಗ್ಗೆ ದೇವೇಗೌಡರು ಒಳ್ಳೆಯ ಅಭಿಪ್ರಾಯ ಹೇಳಿದ್ರು ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ. ಸುಳ್ಳು ಹೇಳುವುದಕ್ಕೂ ಒಂದು ಮಿತಿ ಇರಬೇಕು.. ನಾನು ಆರ್‌ಎಸ್‌ಎಸ್ ಬಗ್ಗೆ ಹೊಗಳಿದ್ದೇನೆ ಎನ್ನುವುದು ಸುಳ್ಳು. ಅಡ್ವಾಣಿ‌ ಬಂದಾಗ ನಾವು ಸಮಾಲೋಚನೆ ಮಾಡಿದ್ದೆವು. ಎಮರ್ಜೆನ್ಸಿ ಸಮಯದಲ್ಲಿ ಜೈಲಿಗೆ ಹೋಗಿದ್ದರ ಬಗ್ಗೆ ಮಾತನಾಡಿದ್ದೆವು. ಬಾಂಕ್ವೆಟ್‌ ಹಾಲ್‌ನಲ್ಲಿ ಒಂದು ಕಾರ್ಯಕ್ರಮ‌ ನಡೆದಿತ್ತು.. ನಾನೇ ಬಾಂಕ್ವಟ್ ಹಾಲ್ ಅನುಮತಿ ನೀಡಿದ್ದೆ. ನನ್ನ ಅಧ್ಯಕ್ಷತೆಯಲ್ಲಿಯೇ ಕಾರ್ಯಕ್ರಮ ನಡೆದಿತ್ತು. ನಾನು ಆ ಸಭೆಯಲ್ಲೇ ಹೇಳಿದ್ದೆ, ಸಭೆಯನ್ನು ದುರುಪಯೋಗ ಮಾಡುವುದು ಸರಿಯಲ್ಲ ಎಂದಿದ್ದೆ. ನಾವು ತುರ್ತುಪರಿಸ್ಥಿತಿಗೆ ಬೆಂಬಲಿಸುತ್ತೇವೆ ಎಂದು ಹೇಳಿ ಅನೇಕರು ಬರೆದುಕೊಟ್ಟರು. ನನಗೂ ಆರ್ ಎಸ್ ಎಸ್​ಗೂ ಎನ್ ಸಂಬಂಧ..? ಆರ್ ಎಸ್ ಎಸ್ ಬಗ್ಗೆ ಗಂಧವೂ ಗೊತ್ತಿಲ್ಲ ಎಂದು ಹೇಳಿದ್ರು.

 

News First Live Kannada

Leave a comment

Your email address will not be published. Required fields are marked *