ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾ ಪ್ರಯಾಣಿಕರನ್ನು ಪತ್ತೆ ಮಾಡಿದ ಬಿಬಿಎಂಪಿ | BBMP tracked down South African passengers at Bengaluru


ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾ ಪ್ರಯಾಣಿಕರನ್ನು ಪತ್ತೆ ಮಾಡಿದ ಬಿಬಿಎಂಪಿ

ಬಿಬಿಎಂಪಿ

ಬೆಂಗಳೂರು: ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾ ಪ್ರಯಾಣಿಕರು ಪತ್ತೆಯಾಗಿದ್ದಾರೆ. 10 ಜನರ ಪೈಕಿ 9 ಜನ ಬಿಬಿಎಂಪಿ ಸಂಪರ್ಕಕ್ಕೆ ಸಿಕ್ಕಿದ್ದಾರೆ. ದಕ್ಷಿಣ ಆಫ್ರಿಕಾದಿಂದ ಬಂದ ಪ್ರಯಾಣಿಕರು ಬಳಿಕ ನಾಪತ್ತೆಯಾಗಿದ್ದರು. ಪೊಲೀಸ್ ಇಲಾಖೆಯ ಸಹಕಾರದಿಂದ 9 ಜನರನ್ನು ಬಿಬಿಎಂಪಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. 57 ಮಂದಿ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದರು. ಇದರಲ್ಲಿ 10 ಮಂದಿ ಪ್ರಯಾಣಿಕರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಸದ್ಯ 9 ಜನ ಸಂಪರ್ಕಕ್ಕೆ ಸಿಕ್ಕಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ಬಂದವರ ಮಾನಿಟರಿಂಗ್ ಮಾಡುತ್ತಿದ್ದೇವೆ. ಒಮಿಕ್ರಾನ್ ಪತ್ತೆಯಾದಾಗಿನಿಂದ ಕಠಿಣ ನಿಯಮ ಜಾರಿಗೆ ತರಲಾಗಿದೆ. ನವೆಂಬರ್ 23ರಿಂದ ಕೇಂದ್ರ ಕಠಿಣ ನಿಯಮ ಜಾರಿಮಾಡಿದೆ ಅಂತ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ. ನವೆಂಬರ್​ನಲ್ಲಿ ಬಂದಿರುವ ಎಲ್ಲರನ್ನೂ ಪತ್ತೆಹಚ್ಚಲಾಗುತ್ತಿದೆ.ದಕ್ಷಿಣ ಆಫ್ರಿಕಾದಿಂದ ಬಂದ ಎಲ್ಲರನ್ನೂ ಪತ್ತೆ ಮಾಡಲಾಗಿದೆ. ನಾಪತ್ತೆಯಾಗಿದ್ದ ಎಲ್ಲಾ ಪ್ರಯಾಣಿರನ್ನು ಪತ್ತೆ ಮಾಡಲಾಗಿದೆ. ಒಮಿಕ್ರಾನ್ ಸೋಂಕಿತರ ಸಂಪರ್ಕಿತರನ್ನು ಪತ್ತೆಮಾಡಲಾಗಿದೆ. ಎಲ್ಲರನ್ನೂ ಮತ್ತೊಮ್ಮೆ ಟೆಸ್ಟ್ ಮಾಡುವ ಕೆಲಸ ಮಾಡಲಾಗುತ್ತಿದೆ ಅಂತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಸರ್ಕಾರದ ಮಾರ್ಗಸೂಚಿ ಪಾಲನೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೌರವ್ ಗುಪ್ತಾ, ಸರ್ಕಾರ ಆದೇಶ ಮಾಡಿದಾಗಿನಿಂದಲೇ ಪಾಲನೆ ಮಾಡೋ ಕೆಲಸ ಆಗುತ್ತಿದೆ. ಬೂಸ್ಟರ್ ಡೋಸ್ ನೀಡುವ ಬಗ್ಗೆ ತಜ್ಞರು ಸಲಹೆ ನೀಡಿದ್ದಾರೆ. ಹೆಲ್ತ್ ವರ್ಕರ್ಸ್ಗೆ ಬೂಸ್ಟರ್ ಡೋಸ್ ನೀಡುವಂತೆ ಸಲಹೆ ಬಂದಿದೆ. ಈ ಬಗ್ಗೆ ನಮ್ಮ ಅಭಿಪ್ರಾಯವನ್ನ ಸರ್ಕಾರಕ್ಕೆ ತಿಳಿಸಲಾಗಿದೆ. ಸಿಎಂ ಕೇಂದ್ರದ ಗಮನಕ್ಕೆ ತರುವ ಕೆಲಸ ಮಾಡುತ್ತಾರೆ ಅಂತ ಅವರು ತಿಳಿಸಿದರು.

TV9 Kannada


Leave a Reply

Your email address will not be published. Required fields are marked *