ಉಡುಪಿ: ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಮಾಡಬಾರದು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸಿಎಂ ಬದಲಾವಣೆಗೆ ಈಗ ಪರಿಸ್ಥಿತಿ ಅನುಕೂಲಕರವಾಗಿಲ್ಲ. ನಾಯಕತ್ವ ಬದಲಾವಣೆ ಈಗ ಸೂಕ್ತವಲ್ಲ. ಇಷ್ಟು ಸಮಯ ಯಡಿಯೂರಪ್ಪ ಚೆನ್ನಾಗಿ ನಾಯಕತ್ವ ಮಾಡಿದ್ದಾರೆ. ಕೋವಿಡ್ ಸಂದರ್ಭವನ್ನು ಚೆನ್ನಾಗಿ ನಿಭಾಯಿಸಿದ್ದಾರೆ ಎಂದು ಸ್ವಾಮೀಜಿ ಹೇಳಿದರು.

ಬಿಜೆಪಿ ಪಕ್ಷದ ಆಂತರಿಕ ವಿಚಾರ ನಮಗೆ ಗೊತ್ತಿಲ್ಲ. ಅಲ್ಲಿ ಏನು ಚರ್ಚೆಯಾಗಿದೆ ಎಂದು ನನಗೆ ಮಾಹಿತಿ ಇಲ್ಲ. ಆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ. ಈ ಹಂತದಲ್ಲಿ ಸ್ಥಾನ ಬದಲಾವಣೆ ಸೂಕ್ತವಲ್ಲ ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ. ರಾಜ್ಯದಲ್ಲಿ ಪಕ್ಷ ಕಟ್ಟಿದ ರೀತಿ. ನಂತರ ಅವರ ಓಡಾಟ, ಎಲ್ಲವನ್ನೂ ಗಮನಿಸಿ ಈ ಹೇಳಿಕೆ ನೀಡುತ್ತಿದ್ದೇನೆ ಎಂದು ಪಬ್ಲಿಕ್ ಟಿವಿಗೆ ಪೇಜಾವರ ಶ್ರೀ ಹೇಳಿದ್ದಾರೆ.

The post ನಾಯಕತ್ವ ಬದಲಾವಣೆಗೆ ಕಾಲ ಸೂಕ್ತವಾಗಿಲ್ಲ: ಪೇಜಾವರ ಶ್ರೀ appeared first on Public TV.

Source: publictv.in

Source link