ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕರಿಸಿದೆ ಎಂಬುವುದು ಶುದ್ಧ ಸುಳ್ಳು: ಸಚಿವ ಸುನಿಲ್ ಕುಮಾರ್ | Rejecting Narayana Gurus tableaux is lie says Sunil Kumar


ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕರಿಸಿದೆ ಎಂಬುವುದು ಶುದ್ಧ ಸುಳ್ಳು: ಸಚಿವ ಸುನಿಲ್ ಕುಮಾರ್

ಸಚಿವ ಸುನಿಲ್ ಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರದಿಂದ ಕೆಲ ಸ್ತಬ್ಧಚಿತ್ರ ತಿರಸ್ಕಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಮುಖ್ಯವಾಗಿ ನಾರಾಯಣ ಗುರು ಸ್ತಬ್ಧಚಿತ್ರ ತಿರಸ್ಕಾರಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆ ಕನ್ನಡ, ಸಂಸ್ಕೃತಿ‌ ಖಾತೆ ಸಚಿವ ಸುನಿಲ್ ಕುಮಾರ್ (Sunil Kumar) ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಸಿದ್ದರಾಮಯ್ಯ(Siddaramaiah) ಮತ್ತು ಕಾಂಗ್ರೆಸ್ (Congress) ನಾಯಕರು ವಿಷಯ ಪೂರ್ಣ ವಿಷಯ ತಿಳಿದು ಹೇಳಿಕೆ ನೀಡಬೇಕು. ಬೆಂಕಿ ಹಚ್ಚುವ ಕೆಲಸ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿರುವ ನಾರಾಯಣ ಗುರುಗಳ ಭಕ್ತರು ಮತ್ತು ಅನುಯಾಯಿಗಳಿಗೆ ತಪ್ಪು ಸಂದೇಶ ನೀಡಲಾಗಿದೆ. ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಮೊದಲೇ ತಪ್ಪು ಮಾಹಿತಿ ನೀಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಸ್ತಬ್ಧಚಿತ್ರ ಆಯ್ಕೆ ಮಾಡಲು ರಕ್ಷಣಾ ಸಚಿವಾಲಯದ ಸಮಿತಿ ಇದೆ. ನಾರಾಯಣ ಗುರುಗಳ ಸ್ತಬ್ಧಚಿತ್ರ ಕೇಂದ್ರ ಬಿಜೆಪಿ ಸರ್ಕಾರ ತಿರಸ್ಕರಿಸಿದೆ ಎಂಬವುದು ಶುದ್ಧ ಸುಳ್ಳು. ಶಂಕರಾಚಾರ್ಯರ ಸ್ತಬ್ಧಚಿತ್ರ ಕಳುಹಿಸಲು ಕೇಂದ್ರ ಸರ್ಕಾರ ಹೇಳಿಲ್ಲ. ಸಿದ್ದರಾಮಯ್ಯ ಕೊಳಕು ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಕನ್ನಡ, ಸಂಸ್ಕೃತಿ‌ ಖಾತೆ ಸಚಿವ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಸಚಿವ ಸುನಿಲ್ ಕುಮಾರ್​ಗೆ ಕೊರೊನಾ

ಬೆಂಗಳೂರು: ಇಂಧನ ಹಾಗೂ ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ.ಸುನಿಲ್ ಕುಮಾರ್​ಗೆ 2ನೇ ಬಾರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ತಮ್ಮ ಸಂಪರ್ಕಕ್ಕೆ ಬಂದಿರುವವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಅವರು ಜನವರಿ 14 ರಂದು ಮನವಿ ಮಾಡಿದ್ದಾರೆ.

TV9 Kannada


Leave a Reply

Your email address will not be published. Required fields are marked *