ಬೆಂಗಳೂರು ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ (Weekend Curfew) ರದ್ದು ಹಿನ್ನೆಲೆ ನಮ್ಮ ಮೆಟ್ರೋ (Namma metro) ಸಂಚಾರ ನಾಳೆಯಿಂದ (ಜನವರಿ 22) ಯಥಾಸ್ಥಿತಿಯಲ್ಲಿರಲಿದೆ. ಆ ಪ್ರಕಾರ ಪ್ರತಿ ಐದು ನಿಮಿಷಕ್ಕೆ ಒಂದರಂತೆ ಮೆಟ್ರೋ ರೈಲು ಸಂಚಾರ ಮಾಡಲಿದೆ. ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೂ ನಮ್ಮ ಮೆಟ್ರೋ ರೈಲುಗಳು ಕಾರ್ಯಾಚರಣೆ ನಡೆಸಲಿವೆ. ರಾತ್ರಿ 9 ಗಂಟೆಗೆ ಟರ್ಮಿನಲ್ ಸ್ಟೇಷನ್ನಿಂದ ಕೊನೆಯ ರೈಲು ಹೊರಡಲಿದೆ. ವೀಕೆಂಡ್ ಕರ್ಫ್ಯೂ ವೇಳೆ 30 ನಿಮಿಷಗಳಿಗೆ ಒಂದು ರೈಲು (Train) ಕಾರ್ಯಾಚರಣೆಯಾಗುತ್ತಿತ್ತು. ಸದ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ ಹಿನ್ನಲೆ ಮೊದಲಿನ ಫ್ರೀಕ್ವೆನ್ಸಿಯಲ್ಲೇ ಮೆಟ್ರೋ ರೈಲುಗಳ ಕಾರ್ಯಾಚರಣೆ ನಡೆಯಲಿದೆ ಎಂದು ಮೆಟ್ರೋ ನಿಗಮದ ಎಂಡಿ ಅಂಜುಂ ಫರ್ವೇಜ್ ಮಾಹಿತಿ ನೀಡಿದ್ದಾರೆ.
ವೀಕೆಂಡ್ ಕರ್ಫ್ಯೂ ವೇಳೆ ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ ಇತ್ತು
ವೀಕೆಂಡ್ ಕರ್ಫ್ಯೂ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೆ ಅಡ್ಡಿಯಿಲ್ಲ. ಶನಿವಾರ ಮತ್ತು ಭಾನುವಾರ ಎಂದಿನಂತೆ ನಮ್ಮ ಮೆಟ್ರೋ ರೈಲು ಸಂಚರಿಸಲಿದೆ. ನಮ್ಮ ಮೆಟ್ರೋ ಹಸಿರು, ನೇರಳೆ ಮಾರ್ಗದಲ್ಲಿ ಯಾವುದೇ ಬದಲಾವಣೆಯಿಲ್ಲ. ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ಇರಲಿದೆ. ಮೆಟ್ರೋ ರೈಲಿನಲ್ಲಿ ಸದ್ಯ 1800-1900 ಜನ ಪ್ರಯಾಣಿಸುತ್ತಿದ್ದಾರೆ. ಕೊವಿಡ್ ಹೆಚ್ಚಳ ಹಿನ್ನೆಲೆ 800-900 ಜನ ಪ್ರಯಾಣಕ್ಕೆ ಅವಕಾಶ ನೀಡಲಿದ್ದೇವೆ. ಕೊರೊನಾ ನಿಯಮ ಪಾಲಿಸಿ ಮೆಟ್ರೋ ರೈಲು ಓಡಿಸಲು ನಿರ್ಧಾರ ಮಾಡಿದ್ದೇವೆ. ನಮ್ಮ ಮೆಟ್ರೋ ಸಂಚಾರದ ಅವಧಿ ಕಡಿತಗೊಳಿಸಿ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ. ಪ್ರಸ್ತುತ 15 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸುತ್ತಿದೆ. ವೀಕೆಂಡ್ ಕರ್ಫ್ಯೂ ವೇಳೆ 30 ನಿಮಿಷಕ್ಕೊಂದು ಮೆಟ್ರೋ ಸಂಚಾರ ಮಾಡಲಿದೆ. ಎಂದು ಟಿವಿ9ಗೆ ಬಿಎಂಆರ್ಸಿಎಲ್ ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ.