ನಾಳೆಯಿಂದ ರಾಜ್ಯದಲ್ಲಿ ಲಸಿಕಾ ಮೇಳಕ್ಕೆ ಚಾಲನೆ -ಸಚಿವ ಸುಧಾಕರ್

ನಾಳೆಯಿಂದ ರಾಜ್ಯದಲ್ಲಿ ಲಸಿಕಾ ಮೇಳಕ್ಕೆ ಚಾಲನೆ -ಸಚಿವ ಸುಧಾಕರ್

ಬೆಂಗಳೂರು: ಜೂನ್ 21.. ಅಂದ್ರೆ ನಾಳೆಯಿಂದ ಕೋವಿಡ್ ಲಸಿಕೆ ಮೇಳಕ್ಕೆ ಚಾಲನೆ ದೊರೆಯಲಿದೆ ಅಂತ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಈಗಾಗಲೇ 14 ಲಕ್ಷ ಕೋವಿಶೀಲ್ಡ್ ಡೋಸ್ ದಾಸ್ತಾನು ಮಾಡಿದ್ದು, 18 ರಿಂದ 44 ವರ್ಷದವರಿಗೆ, 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಜೊತೆಗೆ ಸೋಮವಾರ 5 ರಿಂದ 7 ಲಕ್ಷ ಡೋಸ್ ನೀಡುವ ಗುರಿಯನ್ನು ಹೊಂದಿದ್ದೇವೆ. ಈವರೆಗೂ ರಾಜ್ಯದಲ್ಲಿ 1.80 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಅಂತ  ಸುಧಾಕರ್ ಮಾಹಿತಿ ನೀಡಿದ್ದಾರೆ.

The post ನಾಳೆಯಿಂದ ರಾಜ್ಯದಲ್ಲಿ ಲಸಿಕಾ ಮೇಳಕ್ಕೆ ಚಾಲನೆ -ಸಚಿವ ಸುಧಾಕರ್ appeared first on News First Kannada.

Source: newsfirstlive.com

Source link