ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ಲಸಿಕಾ ಮೇಳ ಆರಂಭವಾಗಲಿದೆ. ಈ ಹಿನ್ನೆಲೆ ಇಂದು ಸಿಎಂ ಬಿ.ಎಸ್​ ಯಡಿಯೂರಪ್ಪ ಸರ್ಕಾರಿ ನಿವಾಸ ಕಾವೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದಾರೆ.

ಸಎಲ್ಲಾ ಬಿಜೆಪಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಜೆಪಿ ನಡ್ಡಾ ಸಮಾಲೋಚನೆ ನಡೆಸುತ್ತಿದ್ದಾರೆ. ಕೊರೊನಾ ನಿರ್ವಣೆಯಲ್ಲಿ ಯಾವೆಲ್ಲ ರೀತಿ ಕ್ರಮಕೈಗೊಳ್ಳಲಾಗಿದೆ. ಕೇಂದ್ರದಿಂದ ಸಿಗುವ ಉಚಿತ ಲಸಿಕೆ ಸಮರ್ಪಕ ಬಳಕೆ ಹಾಗೂ ವ್ಯರ್ಥವಾಗದಂತೆ ನೋಡಿಕೊಳ್ಳುವ‌ ಕುರಿತು ಚರ್ಚೆ ಮಾಡ್ತಿದ್ದಾರೆ.

ಇದೇ ವೇಳೆ ಪಕ್ಷ ಸಂಘಟನೆ, ಸರ್ಕಾರದ ವರ್ಚಸ್ಸು ಹೆಚ್ಚಿಸುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ನಡ್ಡಾ ಚರ್ಚಿಸಲಿದ್ದಾರೆ ಎನ್ನಲಾಗಿದೆ. ವಿಡಿಯೋ ಕಾನ್ಫರೆನ್ಸ್ ನಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಕಾರ್, ‌ಡಿಸಿಎಂ ಗೋವಿಂದ‌ ಕಾರಜೋಳ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭಾಗಿಯಾಗಿದ್ದಾರೆ.

The post ನಾಳೆಯಿಂದ ಲಸಿಕಾ ಮೇಳ.. ಜೆಪಿ ನಡ್ಡಾ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್​​ನಲ್ಲಿ ಭಾಗಿ appeared first on News First Kannada.

Source: newsfirstlive.com

Source link