ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ವಿತರಣೆ ಪುನರಾರಂಭಿಸಲಾಗುತ್ತದೆ ಅಂತಾ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಮೊದಲಿಗೆ, ರಾಜ್ಯ ಸರ್ಕಾರ ಹೊಸದಾಗಿ ಗುರುತಿಸಿರೋ ಫ್ರಂಟ್​​ಲೈನ್​ ವರ್ಕರ್ಸ್​ಗೆ ಮೊದಲ ಆದ್ಯತೆ ನೀಡಲಾಗುತ್ತದೆ. ನಂತರ ಇತರರಿಗೂ ಆದ್ಯತೆ ನೀಡಲಾಗುತ್ತದೆ ಅಂತ ಟ್ವೀಟ್ ಮೂಲಕ ಸುಧಾಕರ್ ಮಾಹಿತಿ ನೀಡಿದ್ದಾರೆ. 18 ವರ್ಷ ಮೇಲ್ಪಟ್ಟವರು ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

The post ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆ ಪುನರಾರಂಭ -ಸುಧಾಕರ್ appeared first on News First Kannada.

Source: newsfirstlive.com

Source link