ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಪ್ರಕರಣಗಳ ಸಂಖ್ಯೆ ತಗ್ಗುತ್ತಿದ್ದಂತೆ ರಾಜ್ಯ ಸರ್ಕಾರ ನಾಳೆ ಯಿಂದ 3ನೇ ಹಂತದ ಲಾಕ್​ಡೌನ್ ಸಡಿಲಿಕೆ ಜಾರಿ ಮಾಡಿದೆ. ಕೊರೊನಾ ಟಾಸ್ಕ್ ಫೋರ್ಸ್ ಸದಸ್ಯರು ಮತ್ತು ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ಮಾರ್ಗಸೂಚಿಯಂತೆ ದೇವಾಲಯ, ಬಾರ್, ಮಾಲ್​​ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಅಲ್ಲದೆ ರಾಜ್ಯದಲ್ಲಿ ಇದುವರೆಗೆ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂವನ್ನ ತೆಗೆದುಹಾಕಲಾಗಿದೆ. ಮತ್ತು ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕೈಗಾರಿಕೆಗಳಲ್ಲಿ ಶೇ 100ರಷ್ಟು ಉದ್ಯೋಗಿಗಳ ಕೆಲಸಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಮೆಟ್ರೋ, ಬಸ್ ಗಳಲ್ಲಿ ಶೇ 100ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.

ಜೊತೆಗೆ ಸಿನಿಮಾ ಥಿಯೇಟರ್ ಹೊರತುಪಡಿಸಿ ಮಾರ್ಕೆಟ್, ಮಾಲ್ ತೆರೆಯಲು ಅವಕಾಶ ಮಾಡಿಕೊಡಲಾಗಿದೆ.

The post ನಾಳೆಯಿಂದ 3ನೇ ಹಂತದ ಲಾಕ್​ಡೌನ್ ಸಡಿಲಿಕೆ ಜಾರಿ appeared first on News First Kannada.

Source: newsfirstlive.com

Source link