ಬೆಂಗಳೂರು: ರಾಜ್ಯ ಶಿಕ್ಷಣ ಇಲಾಖೆ ನಾಳೆ ಎಸ್​ಎಸ್​ಎಲ್​ಸಿ ಪರೀಕ್ಷೆ ದಿನಾಂಕ ಘೋಷಣೆ ಮಾಡಲಿದೆ ಎನ್ನಲಾಗಿದೆ. ಈ ಕುರಿತು ನಾಳೆ ವಿಕಾಸ ಸೌಧದಲ್ಲಿ ಮಹತ್ವದ ಸಭೆ ಕರೆಯಲಾಗಿದೆ.

ಎಸ್ಎಸ್ಎಲ್​ಸಿ ಪರೀಕ್ಷೆಯ ದಿನಾಂಕ ನಾಳೆಯೇ ನಿರ್ಧಾರವಾಗಲಿದ್ದು ಸಭೆಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಂವಾದ ನಡೆಸಲಿದ್ದಾರೆ. ಸಂವಾದದ ನಂತರ ಪರೀಕ್ಷೆಗೆ ಸಂಬಂಧಿಸಿದ ಅಂಶಗಳನ್ನು ಪ್ರಕಟಿಸಲಿದ್ದಾರೆ ಎನ್ನಲಾಗಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ‌ ನಾಳೆ ಸಭೆ ಜರುಗಲಿದ್ದು ಸಭೆ ಬಳಿಕ ಮಧ್ಯಾಹ್ನ 1 ಗಂಟೆಗೆ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ದಿನಾಂಕ ಘೋಷಣೆಯಾಗಲಿದೆ ಎಂದು ಹೇಳಲಾಗಿದೆ.

The post ನಾಳೆಯೇ SSLC ಪರೀಕ್ಷೆ ದಿನಾಂಕ ಘೋಷಣೆ..? ಮಹತ್ವದ ಸಭೆ ಕರೆದ ಶಿಕ್ಷಣ ಸಚಿವ appeared first on News First Kannada.

Source: newsfirstlive.com

Source link