ಚಾಮರಾಜನಗರ: ರಾಜ್ಯದಲ್ಲಿ ನಾವು ಅಂದುಕೊಂಡಷ್ಟು ಕೋವಿಡ್ ಸಂಖ್ಯೆ ಕಡಿಮೆಯಾಗುತ್ತಿಲ್ಲ ಅಂತ ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ.

ಜಿಲ್ಲೆಯಲ್ಲಿ ಮಾತನಾಡಿದ ಅವರು.. ಗ್ರಾಮೀಣ ಭಾಗದಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ಗ್ರಾಮೀಣ ಭಾಗಕ್ಕೆ ಹೆಚ್ಚು ಒತ್ತು ಕೊಡುತ್ತಿದ್ದೇವೆ. ಕೋವಿಡ್ ಸೋಂಕಿತರಿಗೆ ಹೋಮ್ ಐಸೋಲೇಷನ್​ಗೆ ಅವಕಾಶ ಇಲ್ಲ. ಈ ಬಗ್ಗೆ.. ಈಗಾಗಲೇ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಮರಣದ ಪ್ರಮಾಣ ಕಡಿಮೆಯಾಗುತ್ತಿದೆ. ಜೂನ್ 7ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿರುವುದು ಹೆಚ್ಚು ಅನುಕೂಲವಾಗಲಿದೆ ಅಂತ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

The post ನಾವು ಅಂದ್ಕೊಂಡಷ್ಟು ಕೊರೊನಾ ಕಡಿಮೆಯಾಗಿಲ್ಲ -ಸುರೇಶ್​ ಕುಮಾರ್​ ಎಚ್ಚರಿಕೆ appeared first on News First Kannada.

Source: newsfirstlive.com

Source link