ಚಿತ್ರರಂಗ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ನಟಿಸಿರುವ ‘ರೈಡರ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಡಿ.24ರಂದು ಈ ಚಿತ್ರ ರಿಲೀಸ್ ಆಗಲಿದೆ. ಈ ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಚಂದ್ರು ಮನೋಹರನ್, ಸುನಿಲ್ ಗೌಡ ನಿರ್ಮಾಣ ಮಾಡಿದ್ದಾರೆ. ವಿಜಯ್ಕುಮಾರ್ ಕೊಂಡ ನಿರ್ದೇಶನ ಮಾಡಿದ್ದು, ಲಹರಿ ಸಂಸ್ಥೆ ಮೂಲಕ ಹಾಡುಗಳು ಹೊರಬಂದಿವೆ. ಸಿನಿಮಾದಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೋಡಿಯಾಗಿ ಕಾಶ್ಮೀರಾ ಪರದೇಸಿ ನಟಿಸಿದ್ದಾರೆ. ‘ರೈಡರ್’ (Rider Kannada Movie) ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲು ಚಿತ್ರತಂಡ ಸುದ್ದಿಗೋಷ್ಠಿ ನಡೆಸಿದೆ. ಈಗಾಗಲೇ ಚಿತ್ರದ ಟೀಸರ್ ಮತ್ತು ಹಾಡುಗಳು ಧೂಳೆಬ್ಬಿಸಿವೆ. ಭರ್ಜರಿ ಆ್ಯಕ್ಷನ್ ದೃಶ್ಯಗಳಲ್ಲಿ ನಿಖಿಲ್ ನಟಿಸಿದ್ದಾರೆ. ಈ ಚಿತ್ರದ ಮೇಲೆ ಅವರ ಅಭಿಮಾನಿಗಳು ಸಖತ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ.