ನಿಗಮ ಮಂಡಳಿ ಅಧ್ಯಕ್ಷರು ಮತ್ತು ನಿರ್ದೇಶಕರ ಬದಲಾವಣೆ ಖಚಿತ; ತ್ರಿಸದಸ್ಯರ ಸಮಿತಿ ರಚನೆ | Corporation board chairmen and directors change is sure 3 members Structural Committee formed

ನಿಗಮ ಮಂಡಳಿ ಅಧ್ಯಕ್ಷರು ಮತ್ತು ನಿರ್ದೇಶಕರ ಬದಲಾವಣೆ ಖಚಿತ; ತ್ರಿಸದಸ್ಯರ ಸಮಿತಿ ರಚನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಾಸಕರನ್ನು ಹೊರತುಪಡಿಸಿ ಉಳಿದ ನಿಗಮ ಮಂಡಳಿ ಅಧ್ಯಕ್ಷರು ಮತ್ತು ನಿರ್ದೇಶಕರ ಬದಲಾವಣೆ ಖಚಿತ ಎಂಬ ಮಾಹಿತಿ ಲಭ್ಯವಾಗಿದೆ. ನಿಗಮ ಮಂಡಳಿ ಅಧ್ಯಕ್ಷರು ಮತ್ತು ನಿರ್ದೇಶಕರ ಬದಲಾವಣೆ ಪ್ರಕ್ರಿಯೆಗೋಸ್ಕರ ತ್ರಿಸದಸ್ಯರ ಸಮಿತಿಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಚಿಸಿದ್ದಾರೆ. ಕೋರ್ ಕಮಿಟಿ ಸದಸ್ಯರಾದ ಆರ್. ಅಶೋಕ್, ಲಕ್ಷ್ಮಣ ಸವದಿ ಮತ್ತು ನಿರ್ಮಲ್ ಕುಮಾರ್ ಸುರಾನಾ ಅವರನ್ನು ಸಮಿತಿ ಒಳಗೊಂಡಿದೆ. ತ್ರಿಸದಸ್ಯ ಸಮಿತಿಗೆ ನಿರ್ಮಲ್ ಕುಮಾರ್ ಸುರಾನಾ ಸಂಚಾಲಕರಾಗಿ ನೇಮಗೊಂಡಿದ್ದಾರೆ.

ಈಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ನೇಮಕಗೊಂಡು ಒಂದೂವರೆ ವರ್ಷ ಪೂರೈಸಿರುವ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ನೀಡುವಂತೆ ಸಮಿತಿಗೆ ಸೂಚಿಸಲಾಗಿದೆ. ಸಮಿತಿ ಪಟ್ಟಿ ನೀಡಿದ ನಂತರ ಬೇರೆಯವರ ನೇಮಕಾತಿ ಸಂಬಂಧ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಸಮಿತಿ ರಚನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹಮತ ಸೂಚಿಸಿದ್ದಾರೆ.

ಬಿಜೆಪಿಯ ನೂತನ ರಾಷ್ಟ್ರೀಯ ಕಾರ್ಯಕಾರಿಣಿ ಘೋಷಣೆ: ಕರ್ನಾಟಕದಿಂದ ಆಯ್ಕೆ ಆದವರು ಯಾರು? ಇಲ್ಲಿದೆ ವಿವರ
ಬಿಜೆಪಿ ಗುರುವಾರ 80 ಸದಸ್ಯರ ಹೊಸ ರಾಷ್ಟ್ರೀಯ ಕಾರ್ಯಕಾರಿಣಿ (National Executive) ಸಮಿತಿಯನ್ನು ರಚಿಸಿದೆ. ಸಮಿತಿಯ ಸದಸ್ಯರ ಹೆಸರನ್ನು ಕೂಡ ಘೋಷಿಸಿದೆ. ಸಮಿತಿಯ ಸದಸ್ಯರ ಪೈಕಿ ಕರ್ನಾಟಕದಿಂದ ಬಿಜೆಪಿಯ ಹಲವು ಪ್ರಮುಖ ನಾಯಕರು ಕಾರ್ಯಕಾರಿಣಿ ಸಮಿತಿಗೆ ಆಯ್ಕೆ ಆಗಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಡಿ.ವಿ. ಸದಾನಂದ ಗೌಡ ಕಾರ್ಯಕಾರಿಣಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪ, ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ ಮತ್ತು ಗೋವಿಂದ ಕಾರಜೋಳ ಕಾರ್ಯಕಾರಿಣಿ ಸಮಿತಿಯ ಭಾಗವಾಗಿದ್ದಾರೆ. ಇಬ್ಬರು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ನಿರ್ಮಲಾ ಸೀತಾರಾಮನ್, ವಿಶೇಷ ಆಹ್ವಾನಿತರಾಗಿ ಕಲಬುರ್ಗಿ ಎಂಪಿ ಡಾ. ಉಮೇಶ್ ಜಾಧವ್, ಯುವ ಮೋರ್ಚಾದ ಪರವಾಗಿ ತೇಜಸ್ವಿ ಯಾದವ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಡಿ.ಕೆ. ಅರುಣಾ ಆಯ್ಕೆ ಆಗಿದ್ದಾರೆ.

ಇದನ್ನೂ ಓದಿ: 

‘ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರೆ ನನಗೆ ಬೇಡ’- ಶಾಸಕ ಶ್ರೀಮಂತ ಪಾಟೀಲ್

ನಿಗಮ, ಮಂಡಳಿಗಳ ಅಧ್ಯಕ್ಷರು ಈಗ ಸಂಪುಟ ದರ್ಜೆ ಸಚಿವರಿಗೆ ಸಮಾನರು!

TV9 Kannada

Leave a comment

Your email address will not be published. Required fields are marked *