ಬೆಂಗಳೂರು: ರಾಜ್ಯದಲ್ಲಿ ಇಂದು 13,279 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,64,703 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,77,982 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದ್ದು ಈ ಪೈಕಿ ಇಂದು 40,990 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ನಿನ್ನೆಗಿಂತ ಸುಮಾರು 8,000 ಪಾಸಿಟಿವ್​ ಕೇಸ್​ಗಳು ಇಂದು ಇಳಿಕೆ ಕಂಡಿವೆ. ಇನ್ನು ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 15,64,132 ಕ್ಕೆ ಏರಿಕೆಯಾಗಿದೆ.

ಇಂದು 18,341 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 11,43,250 ಮಂದಿ ಗುಣಮುಖರಾದಂತಾಗಿದೆ. ಇಂದು ಸೋಂಕಿನಿಂದಾಗಿ 271 ಮಂದಿ ಸಾವನ್ನಪ್ಪಿದ್ದು ಈವರೆಗೆ ಸೋಂಕಿನಿಂದಾಗಿ 15,794 ಮಂದಿ ಬಲಿಯಾದಂತಾಗಿದೆ. ರಾಜ್ಯದಲ್ಲಿ ಸದ್ಯ 4,05,068 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತನ್ನ ಬುಲೆಟಿನ್​ನಲ್ಲಿ ಹೇಳಿದೆ.

The post ನಿನ್ನೆಗಿಂತ ಕೊಂಚ ಇಳಿಕೆ ಕಂಡ ಪಾಸಿಟಿವ್ ಸೋಂಕಿತರ ಸಂಖ್ಯೆ.. ಇಂದು 271 ಸಾವು appeared first on News First Kannada.

Source: newsfirstlive.com

Source link