ನವದೆಹಲಿ: ಕೊರೊನಾ ಸಾಂಕ್ರಾಮಿಕವನ್ನ ಮಟ್ಟ ಹಾಕಲು ಭಾರತದಲ್ಲಿ ನಿನ್ನೆಯಿಂದ ಮೂರನೇ ಹಂತದ ವ್ಯಾಕ್ಸಿನೇಷನ್ ಆರಂಭವಾಗಿದ್ದು, 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗ್ತಿದೆ.

ನಿನ್ನೆ ಮೊದಲ ದಿನ 18 ರಿಂದ 44ರ ನಡುವಿನ ವಯಸ್ಸಿನ  84,599 ಜನರಿಗೆ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಇನ್ನು ಎಲ್ಲಾ ಮೂರು ಹಂತಗಳಿಂದ ಸೇರಿ ನಿನ್ನೆ ರಾತ್ರಿ 8ಗಂಟೆವರೆಗೆ ದೇಶದಲ್ಲಿ ಒಟ್ಟಾರೆ 15,68,16,031 ಜನರಿಗೆ ಕೊರೊನಾ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇನ್ನು ಕರ್ನಾಟದಲ್ಲೂ ನಿನ್ನೆ 3ನೇ ಹಂತದ ಲಸಿಕೆ ವಿತರಣೆಗೆ ಸಾಂಕೇತಿಕ ಚಾಲನೆ ನೀಡಲಾಗಿದ್ದು, ಕೆಲವು ಯುವಕ ಯುವತಿಯರು ವ್ಯಾಕ್ಸಿನ್​​​ನ ಮೊದಲ ಡೋಸ್ ಪಡೆದುಕೊಂಡರು. ರಾಜ್ಯಕ್ಕೆ ಅಗತ್ಯ ಪ್ರಮಾಣದ ಲಸಿಕೆ ಬಂದ ನಂತರ ದೊಡ್ಡ ಮಟ್ಟದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ.

ನ್ಯೂಸ್​ಫಸ್ಟ್​ ಕಳಕಳಿ
ಕೊರೊನಾದಿಂದ ರಕ್ಷಿಸಿಕೊಳ್ಳಲು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ. ಮಾಸ್ಕ್ ಧರಿಸಿ, ಸೋಶಿಯಲ್ ಡಿಸ್ಟನ್ಸ್ ಕಾಪಾಡಿ. ಕೈ ತೊಳೆಯುತ್ತಿರಿ. ಮತ್ತು ಮೇ 1 ರಿಂದ 18ರ ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ಪಡೆಯಲು ಅರ್ಹರಾಗಿದ್ದು ರೆಜಿಸ್ಟರ್ ಮಾಡಿಕೊಳ್ಳಬಹುದಾಗಿದೆ. ಅದಕ್ಕಾಗಿ https://www.cowin.gov.in/ ಇಲ್ಲಿಗೆ ಭೇಟಿ ಕೊಟ್ಟು ನೊಂದಣಿ ಮಾಡಿಕೊಳ್ಳಿ. ಮತ್ತೊಂದು ಮುಖ್ಯ ಸಂಗತಿ ಗಮನಿಸಿ CoWin ಆ್ಯಪ್ ಸಾರ್ವಜನಿಕರಿಗೆ ಅಲ್ಲ. ಹೀಗಾಗಿ ಕಡ್ಡಾಯವಾಗಿ ವೆಬ್​ಸೈಟ್​ನಲ್ಲಿಯೇ ನೊಂದಾಯಿಸಿಕೊಳ್ಳಬೇಕು.

 

The post ನಿನ್ನೆ ದೇಶಾದ್ಯಂತ 18-44 ವಯಸ್ಸಿನ 84,599 ಜನರಿಗೆ ಲಸಿಕೆ ವಿತರಣೆ appeared first on News First Kannada.

Source: newsfirstlive.com

Source link