‘ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ನನಗೆ ಗೊತ್ತಿದೆ’ -ಕನ್ನಡಿಗರಿಗೆ ಹಂಸಲೇಖ ಪತ್ರ

ಬೆಂಗಳೂರು: ಕನ್ನಡಿಗರಿಗೆ ಪತ್ರ ಬರೆದಿರುವ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರು, ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ನನಗೆ ಗೊತ್ತಿದೆ.. ನಿಮ್ಮ ಪ್ರೀತಿ ನನಗೆ ತಲುಪಿದೆ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಉಡುಪಿ ಪೇಜಾವರ ಶ್ರೀ ಕುರಿತ ಹಂಸಲೇಖ ಅವರು ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ ಹಂಸಲೇಖ ಅವರು ವಿರುದ್ಧ ಪೊಲೀಸ್​ ಠಾಣೆಗೆ ದೂರು ದಾಖಲಿಸಿದ್ದರು. ದೂರಿನ ಅನ್ವಯ ಪೊಲೀಸರು ಹಂಸಲೇಖ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಹಂಸಲೇಖ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಈ ನಡುವೆ ಕನ್ನಡಿಗರಿಗೆ ಪತ್ರ ಬರೆದಿರುವ ಹಂಸಲೇಖ ಅವರು ಕನ್ನಡಿಗರು ತೋರಿದ ಪ್ರೀತಿಗೆ ಧನ್ಯವಾದ ತಿಳಿಸಿದ್ದಾರೆ.

ಪತ್ರದಲ್ಲಿ ಏನಿದೆ..? 

ಪೂಜ್ಯ ಕರ್ನಾಟಕವೇ ನಮಸ್ಕಾರ..

ನಾನು ಆರೋಗ್ಯವಾಗಿದ್ದೇನೆ. ನನಗೆ ಆರೋಗ್ಯ ತಪ್ಪಿದೇ ಅಂತ ಇಡೀ ಕರ್ನಾಟಕದಿಂದ ಕರೆಗಳು ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿ ಪಡೆಯೋಕೆ ನಾನು ತುಂಬಾನೆ ಸವೆದಿದ್ದೀನಿ, ಸಹಿಸಿದ್ದೀನಿ.. ಅದರ ಸುಖ ಇವತ್ತು ಅನುಭವಿಸುತ್ತಿದ್ದೀನಿ.

ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆ ಕೊಟ್ಟಿದೆ. ನಾನು ಕೇಳದೆ ಇಡೀ ಕರ್ನಾಟಕದಲ್ಲಿ ಲಕ್ಷಾಂತರ ಜನ ಅಭಿಮಾನಿಗಳು ನನ್ನ ಪರವಾಗಿ ಮಾತನಾಡುತ್ತದ್ದಾರೆ. ನನ್ನ ಉದ್ಯಮದ ಆತ್ಮಿಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸುತ್ತಿದ್ದಾರೆ.

ಅಭಿಮಾನ ಆವೇಶವಾಗಬಾರದು: ಆವೇಶ ಅವಘಡಗಳಿಗೆ ಕಾರಣವಾಗಬಾರದು. ಅಭಿಮಾನ ಹಾಡಿನಂತೆ ಇರಬೇಕು. ಹಾಡು ಕೇಳಿಸುತ್ತದೆ.. ಮುಟ್ಟಿಸುತ್ತದೆ. ನಿಮ್ಮ ಪ್ರೀತಿ ನನಗೆ ತಲುಪಿದೆ. ನಿಮ್ಮ ಪ್ರೀತಿಗೆ ನನ್ನ ಹೃದಯ ತುಂಬಿದ ನಮಸ್ಕಾರಗಳು ಎಂದು ಹಂಸಲೇಖ ಧನ್ಯವಾದ ತಿಳಿಸಿದ್ದಾರೆ.

News First Live Kannada

Leave a comment

Your email address will not be published. Required fields are marked *