ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಂಫೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಆದ್ದರಿಂದ ಲಾಕ್​​​ಡೌನ್​ ಮುಂದುವರಿಯುತ್ತದೆ. ಆದರೆ ಎಷ್ಟು ದಿನ ಲಾಕ್​​ಡೌನ್ ಮುಂದುವರಿಸಬೇಕು? ಎಂಬ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡುತ್ತೇವೆ. ಯಾವುದೇ ತೀರ್ಮಾನವಾದರೂ ಇಂದಿನ ಸಭೆಯ ಬಳಿಕ ಮಾಹಿತಿ ನೀಡುತ್ತೇನೆ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಹಳ್ಳಿಗಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ಆದ್ದರಿಂದ ಲಾಕ್​​ಡೌನ್​ ಮುಂದುವರಿಯುತ್ತದೆ. ಉಳಿದಂತೆ ಗುರುವಾರದಿಂದ ಕೈಗಾರಿಕೆಗಳ ರಫ್ತು ಘಟಕಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ. ಈ ಬಗ್ಗೆ ಚರ್ಚೆ ಬಳಿಕವೇ ಅಂತಿಮ ನಿರ್ಧಾರ ಮಾಡಲಾಗುವುದು. ಮುಂದಿನ ಎರಡು ದಿನಗಳಲ್ಲಿ ಮತ್ತೊಂದು ಪ್ಯಾಕೇಜ್​ ಘೋಷಣೆ ಮಾಡುತ್ತೇವೆ. ಆದರೆ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಕ್​​ಡೌನ್​​ಅನ್ನು ಮತ್ತಷ್ಟು ಕಠಿಣ ಮಾಡಿ ವಿಸ್ತರಣೆ ಮಾಡುತ್ತೇವೆ ಎಂದು ತಿಳಿಸಿದರು.

The post ನಿಯಂತ್ರಣಕ್ಕೆ ಬರ್ತಿಲ್ಲ ಕೊರೊನಾ; ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಎಂದ ಸಿಎಂ appeared first on News First Kannada.

Source: newsfirstlive.com

Source link