ದಾವಣಗೆರೆ: ನಿರ್ಮಾಣ ಹಂತದ ಕಟ್ಟಡದ ಪಿಲ್ಲರ್ ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುಕ್ಕವಾಡ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೇ ಆರು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಮತ್ತೊಬ್ಬ ಕಾರ್ಮಿಕನ ಮೃತದೇಹ ಕೂಡ ಅವಶೇಷದ ಅಡಿ ಸಿಲುಕಿರೋ ಶಂಕೆ ವ್ಯಕ್ತವಾಗಿದೆ.
ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ಎಥನಾಲ್ ಘಟಕ ಸ್ಥಾಪನೆ ನಿರ್ಮಿಸುತ್ತಿದ್ದ ಕಟ್ಟಡದ ಪಿಲ್ಲರ್ ಕುಸಿದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ತುರ್ತು ಕಾರ್ಯಾಚರಣೆ ಆರಂಭ ಮಾಡಿದ್ದು, ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.