ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿದ ಬುರ್ಖಾಧಾರಿ ಮಹಿಳೆ, ಎಚ್ಚರಿಸಿದ ಮಕ್ಕಳು, ತಪ್ಪಿದ ಅನಾಹುತ! | Woman wearing a burqa who set fire to a parked car


ನಿಲ್ಲಿಸಿದ್ದ ಕಾರಿಗೆ ಬುರ್ಖಾಧಾರಿ ಮಹಿಳೆಯೊಬ್ಬಳು ಬೆಂಕಿ ಹಚ್ಚಿ ಪರಾರಿಯಾದ ಘಟನೆ ಉತ್ತರಪ್ರದೇಶ ಗೋರಕ್​ಪುರದಲ್ಲಿ ನಡೆದಿದೆ. ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಸಂಚು ರೂಪಿಸಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿಲ್ಲಿಸಿದ್ದ ಕಾರಿಗೆ ಬುರ್ಖಾಧಾರಿ ಮಹಿಳೆಯೊಬ್ಬಳು ಬೆಂಕಿ ಹಚ್ಚಿ ಪರಾರಿಯಾದ ಘಟನೆ ಉತ್ತರಪ್ರದೇಶದ ಗೋರಕ್​ಪುರದಲ್ಲಿ ನಡೆದಿದೆ. ಕಾರಿಗೆ ಬೆಂಕಿ ಹತ್ತಿಕೊಂಡಿದ್ದನ್ನು ಗಮನಿಸಿದ ಮಕ್ಕಳು, ಕೂಡಲೇ ಎಚ್ಚರಿಸಿದ್ದು, ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು. ಇದೇ ವೇಳೆ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿ ಮಹಿಳೆಯ ಬಂಧನಕ್ಕೆ ತನಿಖೆ ಕೈಗೊಂಡಿದ್ದಾರೆ.

TV9 Kannada


Leave a Reply

Your email address will not be published.