‘ನಿವೃತ್ತಿಗೂ ಮುನ್ನ ಪಾಕ್ ನೆಲದಲ್ಲಿ ಕ್ರಿಕೆಟ್ ಆಡಿ’; ಕೊಹ್ಲಿ ಮುಂದೆ ಪಾಕ್ ಅಭಿಮಾನಿಯ ವಿಶೇಷ ಮನವಿ | Virat Kohli please play in Pakistan before you retire Pakistan fan shows placard


Virat Kohli: ವಿರಾಟ್ ಈಗಾಗಲೇ ಒಟ್ಟು 102 ಟೆಸ್ಟ್, 262 ಏಕದಿನ ಮತ್ತು 108 ಟಿ20 ಪಂದ್ಯಗಳನ್ನು ಆಡಿದ್ದಾರೆ. ವಿದೇಶದಲ್ಲಿ ಹಲವು ಪಂದ್ಯಗಳನ್ನು ಆಡಿರುವ ವಿರಾಟ್ ಇದುವರೆಗೂ ಪಾಕಿಸ್ತಾನದಲ್ಲಿ ಒಂದೇ ಒಂದು ಪಂದ್ಯವನ್ನೂ ಆಡಿಲ್ಲ.

ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿಯ ಬಗ್ಗೆ ಅಭಿಮಾನಿಗಳಲ್ಲಿ ಎಂತಹ ಕ್ರೇಜ್ ಇದೆ ಎಂಬುದನ್ನು ಬಾಯಿಬಿಟ್ಟು ಹೇಳಬೇಕಿಲ್ಲ. ವಿರಾಟ್ ಕ್ರೀಸ್‌ಗೆ ಬಂದ ತಕ್ಷಣ ಅವರ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟುತ್ತದೆ. ಇದಕ್ಕೆ ಕಾರಣ ಕ್ರಿಕೆಟ್ ಲೋಕದಲ್ಲಿ ವಿರಾಟ್ ಸೃಷ್ಟಿಸಿರುವ ಅಂತಹ ಹಲವು ದಾಖಲೆಗಳು. ಕ್ರಿಕೆಟ್​ ಲೋಕದ ಅನಭಿಶಕ್ತ ದೊರೆಯಾಗಿರುವ ಕೊಹ್ಲಿಗೆ ಭಾರತ ಮಾತ್ರವಲ್ಲದೆ, ಇಡೀ ವಿಶ್ವದಲ್ಲೇ ಅಭಿಮಾನಿಗಳಿದ್ದಾರೆ. ಅಂತಹ ಅಭಿಮಾನಿಗಳು ತಮ್ಮ ಮನದಾಳದ ಮಾತುಗಳನ್ನು ಹೇಳುವ ಮೂಲಕ ವಿಶ್ವದ ಗಮನ ಸೆಳೆಯುತ್ತಾರೆ. ಈಗ ಅಂತಹದ್ದೇ ಒಂದು ಘಟನೆ ಬದ್ಧವೈರಿ ಪಾಕಿಸ್ತಾನದಲ್ಲಿ ನಡೆದಿದ್ದು, ಪಾಕ್ ದೇಶದ ಕೊಹ್ಲಿ ಅಭಿಮಾನಿಯೊಬ್ಬರು, ವಿರಾಟ್ ಬಳಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವೆ ಟಿ20 ಪಂದ್ಯ ನಡೆಯುತ್ತಿರುವುದೇ ಗೊತ್ತೇ ಇದೆ. 7 ಪಂದ್ಯಗಳ ಟಿ20 ಸರಣಿ ನಡೆಯುತ್ತಿದ್ದಯಮ ಈಗಾಗಲೇ 6 ಪಂದ್ಯಗಳು ಪಲಿತಾಂಶ ಕಂಡಿವೆ. ನಡೆದಿರುವ 6 ಪಂದ್ಯಗಳಲ್ಲಿ ಮೂರು ಪಂದ್ಯಗಳಲ್ಲಿ ಪಾಕಿಸ್ತಾನ ಗೆದ್ದಿದ್ದರೆ, ಇನ್ನುಳಿದ 3 ಪಂದ್ಯಗಳಲ್ಲಿ ಇಂಗ್ಲೆಂಡ್ ಜಯಭೇರಿ ಬಾರಿಸಿದೆ. ಹೀಗಾಗಿ ಅಂತಿಮ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಆದರೆ ಅಂತಿಮ ಪಂದ್ಯಕ್ಕೂ ಮುನ್ನ ನಡೆದ 6ನೇ ಟಿ20 ಪಂದ್ಯದಲ್ಲಿ ಕ್ರಿಕೆಟ್ ಅಭಿಮಾನಿಯೊಬ್ಬರು ‘ಕೊಹ್ಲಿ, ನಿವೃತ್ತಿಯಾಗುವ ಮುನ್ನ ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡಬೇಕು’ ಎಂದು ಬರೆದಿರುವ ಫಲಕವನ್ನು ಹಿಡಿದ್ದು, ಮೈದಾನದಲ್ಲಿ ಕೊಹ್ಲಿ ಬಳಿ ವಿಶೇಷ ಮನವಿ ಮಾಡಿದ ಘಟನೆ ಕ್ಯಾಮರ ಕಣ್ಣಲ್ಲಿ ಸೆರೆಯಾಗಿದೆ. ಈಗ ಈ ವಿಡಿಯೋ ಎಲ್ಲೆಡೆ ಸಖತ್ ವೈರಲ್ ಆಗುತ್ತಿದ್ದು, ಈ ಅಭಿಮಾನಿಯ ಮನವಿಯನ್ನು ಪೂರೈಸುವಂತೆ ಹಲವು ನೆಟ್ಟಿಗರು ಕೊಹ್ಲಿಯನ್ನು ಕೇಳಿಕೊಂಡಿದ್ದಾರೆ.

ಏತನ್ಮಧ್ಯೆ, ವಿರಾಟ್ ಈಗಾಗಲೇ ಒಟ್ಟು 102 ಟೆಸ್ಟ್, 262 ಏಕದಿನ ಮತ್ತು 108 ಟಿ20 ಪಂದ್ಯಗಳನ್ನು ಆಡಿದ್ದಾರೆ. ವಿದೇಶದಲ್ಲಿ ಹಲವು ಪಂದ್ಯಗಳನ್ನು ಆಡಿರುವ ವಿರಾಟ್ ಇದುವರೆಗೂ ಪಾಕಿಸ್ತಾನದಲ್ಲಿ ಒಂದೇ ಒಂದು ಪಂದ್ಯವನ್ನೂ ಆಡಿಲ್ಲ. 2006ರಲ್ಲಿ ಕೊನೆಯ ಬಾರಿಗೆ ಪಾಕಿಸ್ತಾನದಲ್ಲಿ ಭಾರತ ಪ್ರವಾಸ ನಡೆದಿತ್ತು. ಆದರೆ ಆ ವೇಳೆ ವಿರಾಟ್ ಟೀಂ ಇಂಡಿಯಾದಲ್ಲಿ ಇರಲಿಲ್ಲ. 2006ರ ನಂತರ ಉಭಯ ದೇಶಗಳ ನಡುವಿನ ಪರಿಸ್ಥಿತಿಯಿಂದಾಗಿ ದ್ವಿಪಕ್ಷೀಯ ಸರಣಿಗಳು ನಡೆಯುತ್ತಿಲ್ಲ. ಇದರೊಂದಿಗೆ ಪಾಕಿಸ್ತಾನದಲ್ಲಿ ಒಂದೂ ಪಂದ್ಯ ಆಡದವರ ಪಟ್ಟಿಗೆ ಕೊಹ್ಲಿ ಸೇರಿಕೊಂಡಿದ್ದಾರೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.