ಮೈಸೂರು: ವರ್ಗಾವಣೆ ಬೆನ್ನಲ್ಲೇ ನಿರ್ಗಮಿತ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್, ನೂತನ ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ ಅವರಿಗೆ ಅಧಿಕಾರಿವನ್ನ ಹಸ್ತಾಂತರ ಮಾಡಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಪಾಲಿಕೆ ಕಚೇರಿಯಲ್ಲಿ ನೂತನ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ ಕಡತಗಳಿಗೆ ಸಹಿ ಮಾಡುವ ಮೂಲಕ ಅಧಿಕಾರಿವನ್ನ ಸ್ವೀಕಾರ ಮಾಡಿದರು.

ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾ ನಾಗ್ ಮಧ್ಯೆ ಗೊಂದಲಗಳು ನಿರ್ಮಾಣವಾಗಿತ್ತು. ಇದರಿಂದ ರಾಜ್ಯ ಸರ್ಕಾರ ಮುಜುಗರಕ್ಕೆ ಒಳಗಾಗಿತ್ತು. ಹೀಗಾಗಿ ನಿನ್ನೆ ರಾತ್ರಿ ಇಬ್ಬರು ಐಎಎಸ್​ ಅಧಿಕಾರಿಗಳನ್ನ ಅಲ್ಲಿಂದ ಎತ್ತಂಗಡಿ ಮಾಡಿ ನೂತನ ಅಧಿಕಾರಿಗಳನ್ನ ನಿಯುಕ್ತಿಗೊಳಿಸಿದೆ. ಅದರಂತೆ ಇದೀಗ ಪಾಲಿಕೆಯ ನೂತನ ಆಯುಕ್ತರಾಗಿ ಲಕ್ಷ್ಮೀಕಾಂತ್ ರೆಡ್ಡಿ ಅಧಿಕಾರವನ್ನ ಸ್ವೀಕಾರ ಮಾಡಿದರು.

ಇನ್ನು ಮೈಸೂರು ಡಿಸಿಯಾಗಿದ್ದ ರೋಹಿಣಿ ಸಿಂಧೂರಿಯವರನ್ನ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ವಾಣಿಜ್ಯ ತೆರಿಗೆ ಹೆಚ್ಚುವರಿ ಆಯುಕ್ತರಾಗಿದ್ದ ಡಾ.ಗೌತಮ್ ಬಗಾದಿಯವರನ್ನ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ನಿರ್ದೇಶಕರಾಗಿ (ಇ-ಆಡಳಿತ) ವರ್ಗಾವಣೆ ಮಾಡಲಾಗಿದೆ.

The post ನೂತನ ಆಯುಕ್ತ ಲಕ್ಷ್ಮೀಕಾಂತ್​ ರೆಡ್ಡಿಗೆ ಅಧಿಕಾರ ಹಸ್ತಾಂತರಿಸಿದ ಶಿಲ್ಪಾ ನಾಗ್ appeared first on News First Kannada.

Source: newsfirstlive.com

Source link