ನವದೆಹಲಿ: ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಅಡ್ಮಿರಲ್ ಆರ್.ಹರಿ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಹಾಲಿ ಮುಖ್ಯಸ್ಥ ಅಡ್ಮಿರಲ್ ಕರಮ್ಬೀರ್ ಸಿಂಗ್ ನವೆಂಬರ್ 30 ರಂದು ನಿವೃತ್ತರಾಗಲಿದ್ದು, ಅಡ್ಮಿರಲ್ ಆರ್ ಹರಿ ಕುಮಾರ್ ನೌಕಾಪಡೆಯ ಸಾರಥ್ಯವನ್ನು ವಹಿಸಿಕೊಳ್ಳಲಿದ್ದಾರೆ. ನವೆಂಬರ್ 30ರ ಮಧ್ಯಾಹ್ನದಿಂದ ಈ ಆದೇಶ ಜಾರಿಗೆ ಬರಲಿದೆ ಅಂತ ರಕ್ಷಣಾ ಸಚಿವಾಲಯ ಹೇಳಿದೆ.
ಸದ್ಯ ಅಡ್ಮಿರಲ್ ಆರ್ ಹರಿ ಕುಮಾರ್, ವೆಸ್ಟ್ರನ್ ನೌಕಾ ಕಮಾಂಡ್ನ ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.