ನ್ಯಾಯಾಲಯದ ಆದೇಶ ಉಲ್ಲಂಘಿಸಿ ಘನತ್ಯಾಜ್ಯ ವಿಲೇವಾರಿ; ಪಾಲಿಕೆ ಅಧಿಕಾರಿಗಳನ್ನು ಜೈಲಿಗಟ್ಟುವುದಾಗಿ ಹೈಕೋರ್ಟ್ ಎಚ್ಚರಿಕೆ | Karnataka High Court slams and warns BBMP over Garbage Disposal issue Bengaluru News


ನ್ಯಾಯಾಲಯದ ಆದೇಶ ಉಲ್ಲಂಘಿಸಿ ಘನತ್ಯಾಜ್ಯ ವಿಲೇವಾರಿ; ಪಾಲಿಕೆ ಅಧಿಕಾರಿಗಳನ್ನು ಜೈಲಿಗಟ್ಟುವುದಾಗಿ ಹೈಕೋರ್ಟ್ ಎಚ್ಚರಿಕೆ

ಹೈಕೋರ್ಟ್

ಬೆಂಗಳೂರು: ನ್ಯಾಯಾಲಯದ ಆದೇಶ ಉಲ್ಲಂಘಿಸಿ ಘನತ್ಯಾಜ್ಯ ವಿಲೇವಾರಿ ಮಾಡಿದ ಬಗ್ಗೆ ಪಾಲಿಕೆ ಅಧಿಕಾರಿಗಳನ್ನು ಜೈಲಿಗಟ್ಟುವುದಾಗಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಮಾರ್ಚ್ 5 ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರ ಖುದ್ದು ಹಾಜರಿಗೆ ಆದೇಶ ನೀಡಲಾಗಿದೆ. ಮಿಟ್ಟಗಾನಹಳ್ಳಿ ಕ್ವಾರಿ ಪ್ರದೇಶದಲ್ಲಿ ಘನತ್ಯಾಜ್ಯ ವಿಲೇವಾರಿ ಮಾಡಲಾಗಿದೆ. ಹೈಕೋರ್ಟ್ ನಿರ್ಬಂಧಿಸಿದ್ದರೂ ತ್ಯಾಜ್ಯ ವಿಲೇವಾರಿ ಮಾಡಲಾಗಿದೆ. ಈ ಕಾರಣದಿಂದ ಬಿಬಿಎಂಪಿ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದೆ.

ಕೋರ್ಟ್​​ನಿಂದಲೇ ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದ್ದು, ಜೈಲಿಗೆ ಹೋಗಲು ಗಂಟುಮೂಟೆ ಕಟ್ಟಿಕೊಂಡು ಬನ್ನಿ ಎಂದು ಖಡಕ್ ಸೂಚನೆ ಕೊಡಲಾಗಿದೆ. ಕೋರ್ಟ್​​​ ಆದೇಶ ಬಿಬಿಎಂಪಿ ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಇದು ಸಂಪೂರ್ಣವಾಗಿ ನ್ಯಾಯಾಂಗ ನಿಂದನೆಯಾಗಿದೆ. ಯಾರ ಆದೇಶದ ಮೇರೆಗೆ ತ್ಯಾಜ್ಯ ಸುರಿಯಲಾಗಿದೆ. ಈ ಬಗ್ಗೆ ಮಾಹಿತಿ ನೀಡುವಂತೆ ಬಿಬಿಎಂಪಿಗೆ ಕೋರ್ಟ್ ತಾಕೀತು ಮಾಡಿದೆ.

ಹಿಜಾಬ್ ವಿಚಾರಣೆ ಮುಂದೂಡಿದ ಹೈಕೋರ್ಟ್

ಕಾಲೇಜು ಅಭಿವೃದ್ದಿ ಸಮಿತಿಗೆ ಕಾಯ್ದೆಯಡಿ ಅಧಿಕಾರವಿಲ್ಲ. ಹೀಗಾಗಿ ಸಮವಸ್ತ್ರ ಜಾರಿ ಅಧಿಕಾರ ಸಮಿತಿಗೆ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಹಿಜಾಬ್ ವಿವಾದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಾಳೆಗೆ (ಫೆಬ್ರವರಿ 16) ಮುಂದೂಡಿದೆ. ನಾಳೆಗೆ ವಾದಮಂಡನೆ ಮುಂದುವರಿಸಲು ಹೈಕೋರ್ಟ್ ಸೂಚನೆ ನೀಡಿದೆ. ನಾಳೆ ಮಧ್ಯಾಹ್ನ 2.30ಕ್ಕೆ ಮತ್ತೆ ವಿಚಾರಣೆ ನಡೆಯಲಿದೆ. ನಾಳೆ ಕಾಲೇಜುಗಳು ಆರಂಭವಾಗುತ್ತಿವೆ. ಹೀಗಾಗಿ ನಮ್ಮ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕು. ಅರ್ಜಿಯಲ್ಲಿ ವಿದ್ಯಾರ್ಥಿನಿಯರ ಸಹಿ ಇಲ್ಲ. ಹೀಗಾಗಿ ಮಧ್ಯಂತರ ಅರ್ಜಿ ಪರಿಗಣಿಸುವಂತಿಲ್ಲ ಎಂದು ಎಜಿ ಪ್ರಭುಲಿಂಗ್ ನಾವದಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಕೀಲರ ಸಹಿಯೊಂದಿಗೆ ಅರ್ಜಿ ಸಲ್ಲಿಸುವುದು ಸರಿಯಲ್ಲ. ವಿದ್ಯಾರ್ಥಿನಿಯರ ಸಮ್ಮತಿ ಮೇರೆಗೆ ಅರ್ಜಿ ಸಲ್ಲಿಸಲಾಗಿದೆ. ಹೀಗಾಗಿ ನನ್ನ ಸಹಿಯಿರುವ ಅರ್ಜಿ ಪರಿಗಣಿಸಬೇಕು. ವಿದ್ಯಾರ್ಥಿನಿಯರ ಪರ ಮೊಹಮ್ಮದ್ ತಾಹಿರ್ ವಾದ ಮಂಡಿಸಿದ್ದಾರೆ. ಅರ್ಜಿಯಲ್ಲಿ ವಿದ್ಯಾರ್ಥಿನಿಯರ ಸಹಿ ಇಲ್ಲ. ವಿದ್ಯಾರ್ಥಿನಿಯೇ ಪ್ರಮಾಣಪತ್ರಕ್ಕೆ ಸಹಿ ಹಾಕಬೇಕು. ಇಲ್ಲವಾದಲ್ಲಿ ಅರ್ಜಿಯನ್ನು ವಜಾಗೊಳಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

TV9 Kannada


Leave a Reply

Your email address will not be published. Required fields are marked *