ನ್ಯಾಷನಲ್ ಹೆರಾಲ್ಡ್ ಪ್ರಕರಣ; ಕೂಡಲೇ ಮಧ್ಯ ಪ್ರವೇಶಿಸುವಂತೆ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಕೆಪಿಸಿಸಿ | ED investigation Karnataka Congress unit appealing to the President to intervene immediately


ನ್ಯಾಷನಲ್ ಹೆರಾಲ್ಡ್ ಪ್ರಕರಣ; ಕೂಡಲೇ ಮಧ್ಯ ಪ್ರವೇಶಿಸುವಂತೆ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಕೆಪಿಸಿಸಿ

ಸಲೀಂ ಅಹ್ಮದ್

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದೆ.

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಮನವಿ ಸಲ್ಲಿಸಿದೆ. ತನಿಖೆ ಸಂಬಂಧ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೂಡಲೇ ಮಧ್ಯಪ್ರವೇಶಿಸಬೇಕೆಂದು ರಾಜ್ಯಪಾಲರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಪತ್ರ ಸಲ್ಲಿಸಿದ ನಂತರ ರಾಜಭವನದ ಬಳಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ (Salim Ahmed), ರಾಹುಲ್ ಮತ್ತು ಸೋನಿಯಾ ಗಾಂಧಿ ಮೇಲೆ ಸುಳ್ಳು ಕೇಸ್ ಹಾಕಲಾಗಿದ್ದುಇಡಿ ನೋಟಿಸ್ ಕೊಟ್ಟು ಹೆದರಿಸಲಾಗುತ್ತಿದೆ. ವಿಚಾರಣೆ ಹೆಸರಲ್ಲಿ ರಾಹುಲ್ ಗಾಂಧಿಯವರಿಗೆ 3 ದಿನ ಚಿತ್ರ ಹಿಂಸೆ ಕೊಟ್ಟಿದ್ದಾರೆ. ಇಂಥ ಹೆದರಿಕೆ, ಬೆದರಿಕೆಗೆ ನಾವು ಜಗ್ಗೋದಿಲ್ಲ, ಬಗ್ಗೋದಿಲ್ಲ ಎಂದರು.

TV9 Kannada


Leave a Reply

Your email address will not be published.