ನ. 26 ರಿಂದ ಡಿ. 6 ಅಂಬೇಡ್ಕರ್ ಪರಿನಿರ್ವಾಣ ದಿನ, ಸಂವಿಧಾನ ಗೌರವ ಅಭಿಯಾನ: ಛಲವಾದಿ ನಾರಾಯಣಸ್ವಾಮಿ | Chalavadi Narayanaswamy announce Constitutional Honor Campaign from November 26

ನ. 26 ರಿಂದ ಡಿ. 6 ಅಂಬೇಡ್ಕರ್ ಪರಿನಿರ್ವಾಣ ದಿನ, ಸಂವಿಧಾನ ಗೌರವ ಅಭಿಯಾನ: ಛಲವಾದಿ ನಾರಾಯಣಸ್ವಾಮಿ

ಛಲವಾದಿ ನಾರಾಯಣಸ್ವಾಮಿ (ಸಂಗ್ರಹ ಚಿತ್ರ)

ಬೆಂಗಳೂರು: ದೇಶಾದ್ಯಂತ ನವೆಂಬರ್ 26ರಿಂದ ಡಿಸೆಂಬರ್ 6ರ ಅಂಬೇಡ್ಕರ್ ಪರಿನಿರ್ವಾಣ ದಿನದವರೆಗೆ ಸಂವಿಧಾನ ಗೌರವ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಛಲವಾದಿ ನಾರಾಯಣಸ್ವಾಮಿ, ನವೆಂಬರ್ 26 ರಿಂದ ದೇಶಾದ್ಯಂತ ಸಂವಿಧಾನ ಗೌರವ ಅಭಿಯಾನ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ. ಬಿಜೆಪಿಯ ಸಂಘಟನಾತ್ಮಕ 37 ಜಿಲ್ಲೆಗಳಲ್ಲಿ ಸಂವಿಧಾನ ಪುಸ್ತಕ ಹಾಗೂ ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿ ಜಿಲ್ಲೆಯಲ್ಲಿ ಪಾದಯಾತ್ರೆ ಮಾಡಿ ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಗುತ್ತೆ ಎಂದರು.

310 ಮಂಡಲಗಳಲ್ಲಿ ಈ ಅಭಿಯಾನ ನಡೆಯಲಿದೆ. ಮಂಡಲ ಮಟ್ಟದಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಗುತ್ತೆ. ರಾಜ್ಯದ 5 ಕೇಂದ್ರಗಳಲ್ಲಿ ಬೃಹತ್ ಸಭೆ ನಡೆಸಲಾಗುವುದು. ಹುಬ್ಬಳ್ಳಿ, ಕಲಬುರಗಿ, ಮೈಸೂರು, ಶಿವಮೊಗ್ಗ, ಬೆಂಗಳೂರಲ್ಲಿ ಡಿಸೆಂಬರ್ 6ಕ್ಕೆ ಬೃಹತ್ ಸಮಾವೇಶ ನಡೆಸಲಾಗುತ್ತೆ. ಅಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇನ್ನು ಇದೇ ವೇಳೆ ನಾರಾಯಣಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ದಲಿತರ ಬಗ್ಗೆ ಯಾವ ಧೋರಣೆ ಹೊಂದಿದೆ ಅಂತ ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಅರವತ್ತು ವರ್ಷ ದೇಶ ಆಳಿದೆ. ತಳ ಸಮುದಾಯಗಳನ್ನು ಇನ್ನೂ ಹೊಟ್ಟೆಪಾಡಿಗೆ ಸೀಮಿತ ಮಾಡಿ ಇಟ್ಟಿದೆ. ದಲಿತರನ್ನು ಕಾಂಗ್ರೆಸ್ ಓಟ್ ಬ್ಯಾಂಕ್‌ಗೆ ಮಾತ್ರ ಸೀಮಿತ ಮಾಡಿಕೊಂಡಿದೆ. ದಲಿತರಿಗೆ ಕಾಂಗ್ರೆಸ್ಗೆ ಅಧಿಕಾರ ತಪ್ಪಿಸುವ ಶಕ್ತಿ ಇದೆ ಎಂದಿದ್ದಾರೆ.

ಇದನ್ನೂ ಓದಿ: ವಿಚ್ಛೇದನ ವದಂತಿ ಬೆನ್ನಲ್ಲೇ ಹೊಸ ಅಪ್​ಡೇಟ್​ ನೀಡಿದ ಪ್ರಿಯಾಂಕಾ ಚೋಪ್ರಾ

TV9 Kannada

Leave a comment

Your email address will not be published. Required fields are marked *