ಬೆಂಗಳೂರು: ನಿನ್ನೆ ಮಧ್ಯಾಹ್ನ ನಿಧನರಾಗಿದ್ದ ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ಬನಶಂಕರಿ ಚಿತಾಗಾರದಲ್ಲಿ ನೆರವೇರಿದೆ.
ಇಂದು ಮುಂಜಾನೆ ನಟ ಶಿವರಾಂ ಪಾರ್ಥೀವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಿಂದ ತ್ಯಾಗರಾಜ ನಗರದಲ್ಲಿನ ಶಿವರಾಂ ಮನೆಗೆ ತರಲಾಗಿತ್ತು .ಇಲ್ಲಿ ಕುಟುಂಬಸ್ಥರು ಬ್ರಾಹ್ಮಣದ ಯಜುರ್ವೇದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳ ಕಾರ್ಯಗಳನ್ನು ಕೈಗೊಂಡಿದ್ದಾರೆ.
ನಂತರ ಬನಶಂಕರಿ ಚಿತಾಗಾರದಲ್ಲಿ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆಯನ್ನು ಮಾಡಲಾಯಿತು.
ಅಂತ್ಯಕ್ರಿಯೆಯಲ್ಲಿ ಚಿತ್ರರಂಗದ ಗಣ್ಯಾತಿಗಣ್ಯರು ಮತ್ತು ರಾಜಕಾರಣಿಗಳು ಸೇರಿದಂತೆ ಅಪಾರ ಅಭಿಮಾನಿಗಳು ಭಾಗವಹಿಸಿದ್ದರು.