ತುಮಕೂರು: ಕಾಂಗ್ರೆಸ್​ಗೆ ಪಕ್ಷದ ಅಧ್ಯಕ್ಷರೇ ಸುಪ್ರೀಂ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಶಾಸಕ ಜಮೀರ್ ಅಹಮ್ಮದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅದು ಜಮೀರ್ ಅವರ ವೈಯಕ್ತಿಕ ಅಭಿಪ್ರಾಯ ಎಂದು ಸಿದ್ದರಾಮಯ್ಯರೇ ಹೇಳಿದ್ದಾರೆ. ನಮ್ಮ ಜೊತೆ ಫಾಲೋವರ್ಸ್ ಇರ್ತಾರೆ, ಅವರಿಗೆ ಆಸೆಗಳಿರ್ತವೆ. ನಮ್ಮ ನಾಯಕರು ಹೀಗ್ ಆಗ್ಬೇಕು ಎಂಬ ಆಸೆ ಇರುತ್ತೆ. ಸಿದ್ದರಾಮಯ್ಯ ಜೊತೆ ಇರುವ ಜಮೀರ್​ಗೆ ಅವರು ಸಿಎಂ ಆಗ್ಬೇಕು ಎಂಬ ಆಸೆ ಇದೆ.

‘ನಾನೂ ಸಿಎಂ ಆಗಬೇಕು ಅನ್ನೋ ಆಸೆ ಇರುತ್ತೆ’
ಕೆಲವೊಮ್ಮೆ ನಾನೂ ಸಿಎಂ ಆಗ್ಬೇಕು ಎಂಬುದು ಆಸೆ ನಮ್ಮ ಬೆಂಬಲಿಗರದ್ದಾಗಿರುತ್ತೆ. ಆದರೆ ಈ ಬಾರಿ ಪಕ್ಷವನ್ನ ಅಧಿಕಾರಕ್ಕೆ ತರುವಂತದ್ದನ್ನ ಪ್ರತಿಯೊಬ್ಬರೂ ಮಾಡಬೇಕು. ಅದು ನಮ್ಮ ಜವಾಬ್ದಾರಿ. ಬಿಜೆಪಿಯವರು ಕೆಟ್ಟ ಆಡಳಿತವನ್ನ ಕೊಟ್ಟಿದ್ದಾರೆ, ಹಾಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ನಮ್ಮಲ್ಲಿ ಪಕ್ಷದ ವ್ಯವಹಾರ ಬಂದಾಗ ಕಾಂಗ್ರೆಸ್​ನ ರಾಜ್ಯಾಧ್ಯಕ್ಷರೇ ಸುಪ್ರೀಂ ಎಂದು ಸ್ಪಷ್ಟನೆ ನೀಡಿದರು.

ಯಾರೇ ಅಧ್ಯಕ್ಷರಿದ್ರೂ ಕಾಂಗ್ರೆಸ್ ಪಕ್ಷದ ಎಲ್ಲಾ ವ್ಯವಹಾರಗಳಿಗೆ ಅವರೇ ಸುಪ್ರೀಂ. ಡಿ.ಕೆ.ಶಿವಕುಮಾರ್​ಗೆ ಹೈಕಮಾಂಡ್ ಅಧಿಕಾರ ಕೊಟ್ಟಿದೆ. ಡಿ.ಕೆ.ಶಿವಕುಮಾರ್ ಹೇಗೆ ಹೇಳುತ್ತಾರೋ ಹಾಗೆ ಕೇಳಲೇಬೇಕು. ಜಮೀರ್ ಮೇಲೆ ಶಿಸ್ತು ಕ್ರಮಕೈಗೊಳ್ಳೋವರೆಗೂ ಬಂದಿಲ್ಲ. ನಮ್ಮಲ್ಲಿ ಬಣ ರಾಜಕೀಯ ಇಲ್ಲ. ಆ ರೀತಿ ಏನಾದ್ರೂ ಇದ್ದರೆ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಸರಿಪಡಿಸುತ್ತಾರೆ ಅಂತಾ ವಿಶ್ವಾಸ ವ್ಯಕ್ತಪಡಿಸಿದರು.

The post ಪಕ್ಷದ ವ್ಯವಹಾರ ಬಂದಾಗ ರಾಜ್ಯಾಧ್ಯಕ್ಷರೇ ಸುಪ್ರೀಂ -ಡಿಕೆಎಸ್​ ಪರ ಪರಮೇಶ್ವರ್ ಬ್ಯಾಟಿಂಗ್ appeared first on News First Kannada.

Source: newsfirstlive.com

Source link