
ಸಿಎಂ ಬಸವರಾಜ ಬೊಮ್ಮಾಯಿ
ಹಿಂದುತ್ವ ಪರ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿರುವ ಚಿಂತಕ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಸರ್ಜಿಸಿದ್ದಾರೆ.
ದಾವಣಗೆರೆ: 10 ನೇ ತರಗತಿ ಪಠ್ಯ ಪುಸ್ತಕದಲ್ಲಿ ಆರ್ಎಸ್ಎಸ್ (RSS) ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ ಮಾಡಿದ್ದು, ಆದರ್ಶ ಪುರಷ ಯಾರಾಗಬೇಕು? ಏನೆಲ್ಲ ಗುಣ ಇರಬೇಕು? ಇದನ್ನೆಲ್ಲ ಮಕ್ಕಳು ಕಲಿಯಬೇಕು. ಹೀಗಾಗಿ ಈ ಗದ್ಯ ಸೇರ್ಪಡೆ ಮಾಡಲಗಿದೆ. ಸದ್ಯ ಪಠ್ಯದಲ್ಲಿನ ಹೆಗ್ಡೆವಾರ್ ಭಾಷಣವನ್ನು ಸಿಎಂ ಬಸವರಾಜ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದು, ಇದರಲ್ಲಿ ತಪ್ಪೇನಿದೆ, ನಿನ್ನೆ ಪಠ್ಯಪುಸ್ತಕ ತರಿಸಿಕೊಂಡು ಓದಿದ್ದೇನೆ ಎಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ದೇವರಕೊಟ್ಟ ಹೆಲಿಪ್ಯಾಡ್ನಲ್ಲಿ ಹೇಳಿಕೆ ನೀಡಿದರು. ಪಠ್ಯಪುಸ್ತಕ ಪುರಿಷ್ಕರಣೆ ಸಮಿತಿಯನ್ನು ವಿಸರ್ಜಿಸಲಾಗಿದೆ. ಪಠ್ಯದ ಬಗ್ಗೆ ಹಲವಾರು ಮಠಾಧೀಶರುಗಳು ಪತ್ರ ಬರೆದಿದ್ದಾರೆ. ಹೀಗಾಗಿ ಬಸವಣ್ಣನವರ ವಿಚಾರಗಳ ಬಗ್ಗೆ ಸಣ್ಣಪುಟ್ಟ ತಿದ್ದುಪಡಿ ಮಾಡಿ ಮಕ್ಕಳಿಗೆ ಪುಸ್ತಕ ವಿತರಿಸಲಾಗುವುದು. ನಮ್ಮದು ಬಸವ ಪಥ ಸರ್ಕಾರ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜಿಸದ ಸಿಎಂ ಬೊಮ್ಮಾಯಿ
ಹಿಂದುತ್ವ ಪರ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿರುವ ಚಿಂತಕ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿಯನ್ನು (Text Book Revision Committee) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಸರ್ಜಿಸಿದ್ದಾರೆ. ಪಠ್ಯ ಪರಿಷ್ಕರಣೆಯ ಕ್ರಮಗಳ ಬಗ್ಗೆ ಎದ್ದಿರುವ ವಿವಾದಗಳ ಕಾರಣಕ್ಕೆ ಅಥವಾ ಯಾವುದೇ ಒತ್ತಡಕ್ಕೆ ಮಣಿದು ಈ ಸಮಿತಿಯನ್ನು ವಿಸರ್ಜಿಸುತ್ತಿಲ್ಲ ಎಂಬ ಸೂಚನೆಯನ್ನೂ ಪತ್ರಿಕಾ ಪ್ರಕಟಣೆಯಲ್ಲಿ ಮುಖ್ಯಮಂತ್ರಿ ನೀಡಿದ್ದಾರೆ. ಪರೋಕ್ಷವಾಗಿ ಸಮಿತಿಯ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡಿದ್ದಾರೆ. ‘ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.