
ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ
ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದಂತಹ ವ್ಯಕ್ತಿ. ರಾಜ್ಯವನ್ನ ಕಾಂಗ್ರೆಸ್ಗೆ, ದೇಶವನ್ನ ಅರಬ್ಬಿಗೆ ಹೋಲಿಸಿದಂತಹ ವ್ಯಕ್ತಿ. ಅಂಥವರ ಕೈಗೆ ಪಠ್ಯ ಪುಸ್ತಕ ಪರಿಷ್ಕರಣಾ ಅಧಿಕಾರ ಇರುವುದು ಸರಿಯಲ್ಲ.
ಬೆಂಗಳೂರು: ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪರ- ವಿರೋಧಗಳ ಚರ್ಚೆ ಜೋರಾಗಿದೆ. ಈ ನಡುವೆ ಬೆಂಗಳೂರಿನಲ್ಲಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ (Rohith Chakrathirtha) ವಿರುದ್ಧ ದೂರು ದಾಖಲಾಗಿದೆ. ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ (social worker) ಬಿ.ಟಿ.ನಾಗಣ್ಣ ಎಂಬುವವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದಂತಹ ವ್ಯಕ್ತಿ. ರಾಜ್ಯವನ್ನ ಕಾಂಗ್ರೆಸ್ಗೆ, ದೇಶವನ್ನ ಅರಬ್ಬಿಗೆ ಹೋಲಿಸಿದಂತಹ ವ್ಯಕ್ತಿ. ಅಂಥವರ ಕೈಗೆ ಪಠ್ಯ ಪುಸ್ತಕ ಪರಿಷ್ಕರಣಾ ಅಧಿಕಾರ ಇರುವುದು ಸರಿಯಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ದೂರು ನೀಡಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ:
ಬೆಳಗಾವಿ: ಪಠ್ಯಪುಸ್ತಕ ಪರಿಷ್ಕರಣೆ ವಿವಾದದಿಂದ ವಿದ್ಯಾರ್ಥಿಗಳು, ಪಾಲಕರಿಗೆ ಗೊಂದಲ ಉಂಟಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹಿರಿಯ ಸಾಹಿತಿ, ಪತ್ರಕರ್ತ ಸರಜೂ ಕಾಟ್ಕರ್ ಅಸಮಾಧಾನ ಹೊರಹಾಕಿದ್ದಾರೆ. ಕನ್ನಡ ಪಠ್ಯಪುಸ್ತಕದಲ್ಲಿದ್ದ ತಮ್ಮ ಕವಿತೆ, ಶಬ್ದಗಳು ವಾಪಸ್ ಪಡೆಯುವುದಾಗಿ ಸರಜೂ ಕಾಟ್ಕರ್ ಶಿಕ್ಷಣ ಸಚಿವ ಬಿಸಿ ನಾಗೇಶ್ಗೆ ಪತ್ರ ಬರೆದಿದ್ದಾರೆ. ಒಂಬತ್ತನೆ ತರಗತಿಯ ಕನ್ನಡ ಭಾಷೆ ಪಠ್ಯಪುಸ್ತಕದಲ್ಲಿ ಸರಜೂ ಕಾಟ್ಕರ್ ಕವಿತೆಯಿದೆ. ಇಷ್ಟು ವರ್ಷಗಳ ಕಾಲದ ಬದ್ಧತೆಯ ಕಾರಣಕ್ಕೆ, ನನ್ನ ಕವಿತೆಗೆ ಈ ಹಿಂದೆ ಕೊಟ್ಟ ಒಪ್ಪಿಗೆ ಹಿಂದೆ ಪಡೆಯುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲಾಗಿದೆ