ಕಲಬುರಗಿ: ಆಯುಷ್ ಇಲಾಖೆಯ ಸ್ಟಾಫ್ ನರ್ಸ್ ಒಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಲಬುರಗಿ ನಗರದ ಶಿವಾಜಿ ನಗರದಲ್ಲಿ ನಡೆದಿದೆ.

ಇಂದಿರಾ (38) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು, ಸೇಡಂನಲ್ಲಿ ಆಯುಷ್ ಇಲಾಖೆಯ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಲಬುರಗಿ ನಗರದ ಶಿವಾಜಿ ನಗರದಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದೆ. ಮೃತ ಇಂದಿರಾ ಅವರಿಗೆ ಗಂಡ ಸಂಜೀವ್ ರೆಡ್ಡಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ, ಆದ್ದರಿಂದಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ರಾಯಚೂರು ಮೂಲದ ಇಂದಿರಾ ಅವರನ್ನು 2002ರಲ್ಲಿ ಸಂಜೀವ್ ರೆಡ್ಡಿ ಎಂಬುವರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಸಿವಿಲ್ ಕಾಂಟ್ರ್ಯಾಕ್ಟರ್ ಆಗಿದ್ದ ಸಂಜೀವ್ ರೆಡ್ಡಿಯಿಂದ ಹಣಕ್ಕಾಗಿ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಮಾಡಿದ್ದಾರೆ. ಘಟನೆ ಕುರಿತಂತೆ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ಪತಿಯ ಕಿರುಕುಳ ಆರೋಪ: ಬೆಂಕಿ ಹಚ್ಚಿಕೊಂಡು ಸ್ಟಾಫ್​​ನರ್ಸ್ ಆತ್ಮಹತ್ಯೆ appeared first on News First Kannada.

Source: newsfirstlive.com

Source link