ಪತಿ, ಮಾವನ ವಿರುದ್ಧ ಪೊಲೀಸರಿಗೆ ದೂರು ಕೊಟ್ಟ ನಟಿ ಚೈತ್ರಾ ಹಳ್ಳಿಕೇರಿ | Actress Chytra Hallikeri Complains Against Her Husband and Father in law


ಪತಿ, ಮಾವನ ವಿರುದ್ಧ ಪೊಲೀಸರಿಗೆ ದೂರು ಕೊಟ್ಟ ನಟಿ ಚೈತ್ರಾ ಹಳ್ಳಿಕೇರಿ

ನಟಿ ಚೈತ್ರಾ ಹಳ್ಳಿಕೇರಿ

ಮೈಸೂರು: ಬ್ಯಾಂಕ್ ಖಾತೆ ದುರ್ಬಳಕೆ ಆರೋಪ ಹೊರಿಸಿ ನಟಿ ಚೈತ್ರಾ ಹಳ್ಳಿಕೇರಿ (Chytra Hallikeri) ತನ್ನ ಪತಿ ಮತ್ತು ಮಾವನ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಅನುಮತಿಯಿಲ್ಲದೆ ಗೋಲ್ಡ್ ಲೋನ್ ಪಡೆಯಲಾಗಿದೆ ಎಂದು ಪತಿ ಬಾಲಾಜಿ ಪೋತರಾಜ್, ಮಾವ ಪೋತರಾಜ್ ವಿರುದ್ಧ ಚೈತ್ರಾ ದೂರು ನೀಡಿದ್ದಾರೆ. ಗೋಲ್ಡ್​ ಲೋನ್ ಪಡೆಯುವ ವೇಳೆ ತನ್ನ ಸಹಿಯನ್ನು ನಕಲು (ಫೋರ್ಜರಿ) ಮಾಡಲಾಗಿದೆ. ಈ ಅವ್ಯವಹಾರದಲ್ಲಿ ಬ್ಯಾಂಕ್ ಮ್ಯಾನೇಜರ್ ಕೂಡ […]

ಮೈಸೂರು: ಬ್ಯಾಂಕ್ ಖಾತೆ ದುರ್ಬಳಕೆ ಆರೋಪ ಹೊರಿಸಿ ನಟಿ ಚೈತ್ರಾ ಹಳ್ಳಿಕೇರಿ (Chytra Hallikeri) ತನ್ನ ಪತಿ ಮತ್ತು ಮಾವನ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಅನುಮತಿಯಿಲ್ಲದೆ ಗೋಲ್ಡ್ ಲೋನ್ ಪಡೆಯಲಾಗಿದೆ ಎಂದು ಪತಿ ಬಾಲಾಜಿ ಪೋತರಾಜ್, ಮಾವ ಪೋತರಾಜ್ ವಿರುದ್ಧ ಚೈತ್ರಾ ದೂರು ನೀಡಿದ್ದಾರೆ. ಗೋಲ್ಡ್​ ಲೋನ್ ಪಡೆಯುವ ವೇಳೆ ತನ್ನ ಸಹಿಯನ್ನು ನಕಲು (ಫೋರ್ಜರಿ) ಮಾಡಲಾಗಿದೆ. ಈ ಅವ್ಯವಹಾರದಲ್ಲಿ ಬ್ಯಾಂಕ್ ಮ್ಯಾನೇಜರ್ ಕೂಡ ಶಾಮೀಲಾಗಿದ್ದಾರೆ. ಪ್ರಕರಣ ಸಂಬಂಧ ತಮಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಅವರು ಮೂರು ದಿನಗಳ ಹಿಂದೆಯೇ ದೂರು ನೀಡಿದ್ದಾರೆ. ಈ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಖುಷಿ, ಶಿಷ್ಯ, ಗುನ್ನ ಸೇರಿದಂತೆ ಹಲವು ಚಿತ್ರಗಳಲ್ಲಿ ಚೈತ್ರಾ ನಾಯಕಿಯಾಗಿ ನಟಿಸಿದ್ದರು. ‘ಅರ್ಥ ಮಾಡ್ಕೊಳೋ.. ನನ್ ಅರ್ಥ ಮಾಡ್ಕೊಳೋ…’, ’ಕಳ್ಳ ಚಂದಮಾಮ…’ ಸೇರಿದಂತೆ ಹಲವು ಹಾಡುಗಳು ಚೈತ್ರಾ ಅವರಿಗೆ ಹೆಸರು ತಂದುಕೊಟ್ಟಿದ್ದವು. ಸುಮಾರು 16 ವರ್ಷಗಳ ಹಿಂದೆ ಬಾಲಾಜಿ ಪೋತರಾಜ್ ಎಂಬ ಉದ್ಯಮಿಯನ್ನು ಮದುವೆಯಾಗಿದ್ದರು. ಈ ವೇಳೆ ಉದ್ಯಮಿ ಮದುವೆಯ ನಂತರ ನಟನೆ ಬಿಡಬೇಕು ಎಂಬ ಷರತ್ತು ಹಾಕಿದ್ದರು ಎಂದು ಹೇಳಲಾಗಿದೆ.

‘ಮದುವೆ ನಂತರ ನಟನೆ ಬಿಡಬೇಕು ಎಂಬ ಷರತ್ತನ್ನು ನಾನು ಪಾಲಿಸಿದ್ದೆ. ಆದರೆ, ನನಗೆ ತುಂಬಾ ಕಷ್ಟವಾಗುತ್ತಿತ್ತು. ಹೇಗೋ ಕಷ್ಟಪಟ್ಟು ಧಾರಾವಾಹಿ ನಿರ್ಮಿಸಿದ್ದೆ. ಅದರಲ್ಲಿ ಆದ ಸಂಪಾದನೆಯನ್ನೂ ಪತಿ ಕಿತ್ತುಕೊಂಡಿದ್ದರು. ಅಷ್ಟೇ ಅಲ್ಲದೆ ನನ್ನನ್ನು ಥಳಿಸಿದ್ದರು’ ಎಂದು ಮಾರ್ಚ್ 14, 2018ರಂದು ಚೈತ್ರಾ ಬಸವನಗುಡಿ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು.

TV9 Kannada


Leave a Reply

Your email address will not be published. Required fields are marked *