ಮೈಸೂರು: ಅಕ್ರಮ ಸಂಬಂಧದ ಶಂಕೆ ಹಿನ್ನೆಲೆ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದಿರುವ ಘಟನೆ ಮೈಸೂರಿನ ತಿ. ನರಸೀಪುರ ತಾಲೂಕಿನ  ವಾಟಾಳು ಗ್ರಾಮದಲ್ಲಿ ನಡೆದಿದೆ.

ವಾಟಾಳು ಗ್ರಾಮದ ನಿವಾಸಿ ಕುಮಾರ್ ಎಂಬಾತ ಅದೇ ಗ್ರಾಮದ ಸಿಪಾಯಿ ಎಂಬಾತನಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಕುಮಾರ್ ಪತ್ನಿಯ ಜೊತೆ ಇರಿತಕ್ಕೊಳಗಾದ ಸಿಪಾಯಿ ಅಕ್ರಮ ಸಂಬಂಧ ಹೊಂದಿದ್ದ ಎಂದು ಹೇಳಲಾಗಿದೆ. ಇದರಿಂದ ಕುಪಿತನಾದ ಕುಮಾರ್ ಸಿಪಾಯಿಗೆ ಚಾಕುವಿನಿಂದ ಇರಿದು ಸ್ಥಳದಿಂದ ಕಾಲ್ಕಿತ್ತಿದ್ದಾನೆ ಎನ್ನಲಾಗಿದೆ.

ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಸಿಪಾಯಿಯನ್ನ ಮೈಸೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದ್ದು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ತಿ. ನರಸೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ.. ವ್ಯಕ್ತಿಗೆ ಚಾಕುವಿನಿಂದ ಇರಿದ ಪತಿ appeared first on News First Kannada.

Source: newsfirstlive.com

Source link