ಮೈಸೂರು: ಶಿಕ್ಷಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕನನ್ನು ಲೋಕೇಶ್ ಎಂದು ಗುರುತಿಸಲಾಗಿದ್ದು, ಮೈಸೂರು ಜಿಲ್ಲೆಯ ಕೆ.ಆರ್ ನಗರದ ಕೋಗಿಲೂರು ಗ್ರಾಮದ ನಿವಾಸಿ. ಇವರು ಕೋವಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಕೊರೊನಾ ಪಾಸಿಟಿವ್ ದೃಢವಾಗುತ್ತಿದ್ದಂತೆಯೇ ಮೃತ ಲೋಕೇಶ್ ಗೆ ಕುಟುಂಬಸ್ಥರು ಆತ್ಮಸ್ಥೈರ್ಯ ತುಂಬಿದ್ದರು. ಅಲ್ಲದೆ ವಾರ್ ರೂಂನಿಂದ ಕರೆ ಮಾಡಿ ಆತಂಕ ಪಡೆದಂತೆ ತಿಳಿಸಿದ್ದರು. ಆದರೂ ಭಯದಿಂದ ಮನೆ ಬಿಟ್ಟು ಹೋಗಿ ಲೋಕೇಶ್ ಸಾವಿಗೆ ಶರಣಾಗಿದ್ದಾರೆ.

ಲೋಕೇಶ್ ಗೆ ಕಳೆದ ವರ್ಷವಷ್ಟೇ ಮದುವೆಯಾಗಿತ್ತು. ತನ್ನ ಪತ್ನಿ ಮನೆಗೆ ಹೋಗುವುದಾಗಿ ಹೇಳಿದ್ದ ಲೋಕೇಶ್, ಪತ್ನಿ ಮನೆ ಬಳಿ ಬೈಕ್ ನಿಲ್ಲಿಸಿ ಅಲ್ಲಿಯೇ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದರು. ಎರಡು ದಿನದ ಬಳಿಕ ಹಾಸನ ಜಿಲ್ಲೆಯ ಅರಕಲಗೂಡಿನ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಈ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ಪತ್ನಿ ಮನೆಗೆ ಹೋಗೋದಾಗಿ ಹೇಳಿ ನದಿಗೆ ಹಾರಿ ಶಿಕ್ಷಕ ಆತ್ಮಹತ್ಯೆ appeared first on Public TV.

Source: publictv.in

Source link