ಪದ್ಮಭೂಷಣ ಪ್ರಶಸ್ತಿ ಸ್ವೀಕಾರ ಮಾಡಿದ ಹಿರಿಯ ಸಾಹಿತಿ ಚಂದ್ರಶೇಖರ್​ ಕಂಬಾರ್​


ಹಿರಿಯ ಸಾಹಿತಿ ಚಂದ್ರಶೇಖರ್​ ಕಂಬಾರ್​ ಅವರಿಗೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ರಾಷ್ಟ್ರಪತಿ ಭವನದಲ್ಲಿ ಇಂದು ದೇಶದ ತೃತೀಯ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಪ್ರದಾನ ಮಾಡಿ ಗೌರವಿಸಿದರು.

ಇಂದು ಮತ್ತು ನೆನ್ನೆ ದೇಶದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮ ಪುರಸ್ಕಾರವನ್ನು ನವದೆಹಲಿಯ ರಾಷ್ಟ್ರಪತಿಭವನದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರದಾನ ಮಾಡಿದರು. ಈ ಸಲ 7 ಪದ್ಮವಿಭೂಷಣ. 10 ಪದ್ಮಭೂಷಣ. ಮತ್ತು 102 ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಇಮದು ಕೂಡ ಹಲವರಿಗೆ ಪ್ರಶಸ್ತಿ ಪ್ರದಾನವನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ. ಗೃಹ ಮಂತ್ರಿ ಅಮಿತ್​ ಶಾ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಪದ್ಮ ಭೂಷಣ ಪ್ರಶಸ್ತಿಗೆ ಭಾಜನರಾದ ಜ್ಞಾನಪೀಠ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ

ಖ್ಯಾತ ಸಾಹಿತಿ ಚಂದ್ರಶೇಖರ ಕಂಬಾರ ಅವರು ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಭಾರತ ಸರ್ಕಾರ ಅವರನ್ನು ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಬೆಳಗಾವಿ ಮೂಲದ ಕಂಬಾರರು ಒಮ್ಮೆ ವಿಧಾನ ಪರಿಷತ್‌ ಸದಸ್ಯರ ಆಗಿದ್ದರು. ಇವರಿಗೆ 2001ರಲ್ಲಿ ಪದ್ಮಶ್ರೀ ಪ್ರಶಸ್ತಿ, 2010ರಲ್ಲಿ ಪ್ರತಿಷ್ಠಿತ ಜ್ನಾನಪೀಠ ಪ್ರಶಸ್ತಿಗಳು ಸಂದಿವೆ. ಧಾರವಾಡದಲ್ಲಿ ನಡೆದ 84 ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನೂ ವಹಿಸಿದ್ದ ಇವರು ಇದೀಗ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ:ಅಪ್ಪು ಸಮಾಧಿ ಮುಂದೆ ಫೇವರಿಟ್​ ಬಿರಿಯಾನಿ ತಂದಿಟ್ಟ ಹೋಟೇಲ್​ ಮಾಲೀಕ

ಕಾದಂಬರಿಕಾರ, ಕಥೆಗಾರ, ಕವಿ, ನಾಟಕಕಾರರಾಗಿ ಜನಪ್ರಿಯರಾಗಿರುವ ಇವರು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿ, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರಾಗಿ ಹಾಗೂ ಹಂಪಿ ಕನ್ನಡ ವಿವಿಯ ಮೊದಲ ಉಪಕುಲಪತಿಯಾಗಿಯೂ ಸೇವೆ ಸಲ್ಲಿಸಿದವರು. ಸದ್ಯ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

News First Live Kannada


Leave a Reply

Your email address will not be published. Required fields are marked *