ಚಿಕ್ಕಬಳ್ಳಾಪುರ: ವೀಕೆಂಡ್ ಕರ್ಫ್ಯೂ  ನಡುವೆಯೂ ನಂದಿಗಿರಿಧಾಮಕ್ಕೆ ಬೆಳ್ಳಂ ಬೆಳಿಗ್ಗೆ ನೂರಾರು ಪ್ರವಾಸಿಗರ ಆಗಮನದ ವರದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ಬೆನ್ನಲ್ಲೇ ಪೊಲೀಸರು ನಂದಿಗಿರಿಧಾಮ ಗೇಟ್ ಕ್ಲೋಸ್ ಮಾಡಿದ್ದಾರೆ.

ಕಳೆದ ಸೋಮವಾರದಿಂದ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪ್ರವಾಸಿ ತಾಣಗಳನ್ನು ಅನ್‍ಲಾಕ್ ಮಾಡುವಂತೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡದಿದ್ದರೂ ಕೂಡ ಜಿಲ್ಲಾಡಳಿತ ನಂದಿಬೆಟ್ಟವನ್ನು ಅನ್‍ಲಾಕ್ ಮಾಡಿತ್ತು. ಸೋಮವಾರದಿಂದ ಕಡಿಮೆ ಸಂಖ್ಯೆಯಲ್ಲಿ ಪ್ರವಾಸಿಗರು ನಂದಿಬೆಟ್ಟಕ್ಕೆ ಬಂದು ಹೋಗುತ್ತಿದ್ದರು. ಅದೇ ರೀತಿ ಇಂದು ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಇದ್ದರೂ ಕೂಡ ಜನ ನಂದಿಬೆಟ್ಟಕ್ಕೆ ಬೆಳ್ಳಂ ಬೆಳಿಗ್ಗೆ ಬಂದಿದ್ದಾರೆ. ಇದನ್ನೂ ಓದಿ: ಸುಪಾರಿ ಕೊಟ್ಟು ಅಪ್ಪನನ್ನೇ ಕೊಲ್ಲಿಸಿದ ಪಾಪಿ ಮಗ

ವೀಕೆಂಡ್ ಕರ್ಫ್ಯೂ ಇದ್ದರೂ ಕೂಡ ಕ್ಯಾರೆ ಎನ್ನದೆ ನಂದಿಗಿರಿಧಾಮಕ್ಕೆ ನೂರಾರು ಜನ ಆಗಮಿಸಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಬಂದಿದ್ದ ಪ್ರವಾಸಿಗರನ್ನು ವಾಪಸ್ ಕಳುಹಿಸಿ ಮುಖ್ಯ ಪ್ರವೇಶ ದ್ವಾರ ಬಂದ್ ಮಾಡಿದ್ದಾರೆ. ಹಾಗಾಗಿ ವೀಕೆಂಡ್‍ನಲ್ಲಿ ನಂದಿಬೆಟ್ಟಕ್ಕೆ ಎಂಟ್ರಿ ಆಗಲು ಬಂದ ಪ್ರವಾಸಿಗರು ಗೇಟ್ ನಿಂದಲೇ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಆಗುತ್ತಿದ್ದಾರೆ.

The post ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ತೆರೆದಿದ್ದ ನಂದಿಬೆಟ್ಟ ಕ್ಲೋಸ್ appeared first on Public TV.

Source: publictv.in

Source link