ಬಳ್ಳಾರಿ: ಪಬ್ಲಿಕ್ ಟಿವಿ ವರದಿ ಬಳಿಕ ಬಳ್ಳಾರಿ ಜಿಲ್ಲಾಧಿಕಾರಿಗಳು ಕೋವಿಡ್ ಕೇರ್ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದ ಕೋವಿಡ್ ಕೇರ್ ಸೆಂಟರ್ ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ರೋಗಿಗಳು ಊಟ ಮಾಡದೆ ಪ್ರತಿಭಟನೆ ಮಾಡಿದ್ದರು. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಸರಿಯಾದ ಊಟ ನೀಡದ ಕಾರಣ ಅಲ್ಲಿನ ಸುಮಾರು 60 ಜನ ರೋಗಿಗಳು ಊಟ ಮಾಡದೇ ಪ್ರತಿಭಟನೆ ಮಾಡಿದ್ದರು.

ಈ ಕುರಿತು ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಪಬ್ಲಿಕ್ ಟಿವಿ ವರದಿಗೆ ಎಚ್ಚೆತ್ತ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಸೇರಿದಂತೆ ಜಿಲ್ಲಾ ಪಂಚಾಯತ್ ಸಿಇಒ ನಂದಿನಿ ಅವರು ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿದ್ದಾರೆ. ಅಲ್ಲಿ ದಾಖಲಾಗಿರುವ 60ಕ್ಕೂ ಹೆಚ್ಚು ಜನರ ಯೋಗಕ್ಷೇಮ ವಿಚಾರ ನಡೆಸಿ, ಸರಿಯಾದ ರೀತಿಯಲ್ಲಿ ಊಟ ನೀಡುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಬೆಡ್ ಕಡಿಮೆ ಇರುವ ಕಾರಣ ರೋಗ ಲಕ್ಷಣಗಳು ಇಲ್ಲದವರನ್ನು ಮನೆಯಲ್ಲಿರಿಸಿ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿತ್ತು, ಆದ್ರೆ ಹೋಮ್ ಐಸೋಲೇಶನ್ ನಿಂದಾಗಿ ಸೋಂಕು ಹೆಚ್ಚಾದ ಕಾರಣ ಜಿಲ್ಲಾಡಳಿತ ಪ್ರತಿ ತಾಲೂಕಿನ ಕೋವಿಡ್ ಕೇರ್ ಸೆಂಟರ್ ತೆರೆದು ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ಕೇರ್ ಸೆಂಟರ್ ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ರೋಗಿಗಳು ಪ್ರತಿಭಟನೆ ಮಾಡಿದ್ದರು.

The post ಪಬ್ಲಿಕ್ ಟಿವಿ ವರದಿ ಬಳಿಕ ಎಚ್ಚೆತ್ತ ಜಿಲ್ಲಾಡಳಿತ – ಕೋವಿಡ್ ಕೇರ್ ಸೆಂಟರ್ ಗೆ ಜಿಲ್ಲಾಧಿಕಾರಿ ಭೇಟಿ appeared first on Public TV.

Source: publictv.in

Source link