ಬೆಂಗಳೂರು: ಕೊರೊನಾದಿಂದ ಮೃತರಾದ ವ್ಯಕ್ತಿಗಳ ಕುಟುಂಬಕ್ಕೆ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯ ನಿಯಮದಂತೆ ಪರಿಹಾರ ನೀಡಬೇಕೆಂಬ ನಮ್ಮ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದರೂ‌ ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ಈಗಲಾದರೂ ಕೇಂದ್ರ ಮತ್ತು ರಾಜ್ಯ‌ ಸರ್ಕಾರ ಮಾನವೀಯತೆಯಿಂದ ನಡೆದುಕೊಳ್ಳಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ.. ಒಂದು‌ ಕುಟುಂಬದಲ್ಲಿ ಕೊರೊನಾದಿಂದ ಸಾವಿಗೀಡಾದ ಒಬ್ಬ ವ್ಯಕ್ತಿಗೆ ಮಾತ್ರ ಒಂದು‌ ಲಕ್ಷ ರೂಪಾಯಿ ಪರಿಹಾರ ನೀಡುವ ರಾಜ್ಯ ಸರ್ಕಾರದ ನಿರ್ಧಾರ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯ ನಿಯಮಗಳಿಗೆ ವಿರುದ್ಧವಾಗಿದೆ ಎಂಬ ನಮ್ಮ ವಾದಕ್ಕೆ ಸುಪ್ರೀಂ ಕೋರ್ಟ್‌ ಸಹಮತ ವ್ಯಕ್ತಪಡಿಸಿರುವುದು ಸ್ವಾಗತಾರ್ಹ.

ಮರು ಸಮೀಕ್ಷೆಗೆ ಒತ್ತಾಯ
ಕೊರೊನಾದಿಂದ ಮೃತಪಟ್ಟವರಿಗೆ ‌ಪರಿಹಾರ ನೀಡಲು ಆರು ವಾರಗಳೊಳಗೆ ಮಾರ್ಗದರ್ಶಿ ಸೂತ್ರವನ್ನು ಸಿದ್ಧ ಪಡಿಸಬೇಕೆಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ರಾಷ್ಟ್ರೀಯ ವಿಕೋಪ ಪರಿಹಾರ ನಿಧಿ ಗಂಭೀರವಾಗಿ ಪರಿಗಣಿಸಿ ಸೂಕ್ತಕ್ರಮ ಕೈಗೊಳ್ಳಬೇಕು.

ಸುಪ್ರೀಂ ಕೋರ್ಟ್ ಆದೇಶದನ್ವಯ ಕೊರೊನಾದಿಂದ‌ ಮೃತಪಟ್ಟವರಿಗೆಲ್ಲರಿಗೂ ಪರಿಹಾರ ಸಿಗಬೇಕಾದರೆ‌ ಸಾವಿನ‌‌ ನಿಖರವಾದ ಸಂಖ್ಯೆ‌ ಲಭ್ಯ ಇರಬೇಕಾಗುತ್ತದೆ. ಇದಕ್ಕಾಗಿ‌ ಕೊರೊನಾ ಸಾವಿನ ಮರುಸಮೀಕ್ಷೆ ನಡೆಸಬೇಕು ಅಂತಾ ರಾಜ್ಯ ಸರ್ಕಾರವನ್ನ ಒತ್ತಾಯಿಸಿದ್ದಾರೆ. 

The post ಪರಿಹಾರ ನೀಡುವ ಮೊದಲು ಕೊರೊನಾ ಸಾವಿನ ಮರು ಸಮೀಕ್ಷೆ ಆಗಬೇಕು -ಸಿದ್ದರಾಮಯ್ಯ ಒತ್ತಾಯ appeared first on News First Kannada.

Source: newsfirstlive.com

Source link