ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಘೋಟ್ಕಿ ಬಳಿ ನಡೆದಿದೆ. ರೆಟಿ-ದಹರ್ಕಿ ಮಾರ್ಗದ ಸರ್​ ಸಯ್ಯದ್ ಎಕ್ಸ್​ಪ್ರೆಸ್​ ರೈಲು ಹಾಗೂ ಮಿಲ್ಲಟ್ ಎಕ್ಸ್​ಪ್ರೆಸ್ ಮಧ್ಯೆ ಅಪಘಾತ ಸಂಭವಿಸಿದೆ.

ಈ ಕುರಿತು ಘೋಟ್ಕಿಯ ಡಿಸಿ ಉಸ್ಮಾನ ಅಬ್ದುಲ್ಲಾ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ಬೋಗಿಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸ್ ಹಾಗೂ ರಕ್ಷಣಾ ಸಿಬ್ಬಂದಿ ಆಗಮಿಸಿದ್ದು ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎನ್ನಲಾಗಿದೆ. ಈ ಕುರಿತು ಪಾಕ್ ಮಾಧ್ಯಮವೊಂದು ವರದಿ ಮಾಡಿದೆ.

The post ಪಾಕ್​ನಲ್ಲಿ ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ: 30ಕ್ಕೂ ಹೆಚ್ಚು ಮಂದಿ ದುರ್ಮರಣ appeared first on News First Kannada.

Source: newsfirstlive.com

Source link