ಪಾಕ್‌ ಪರ ಘೋಷಣೆ ಕೂಗಿದ ಬೆಂಗಳೂರಿನ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು – Bengaluru engineering students pro Pakistan slogans


ಬೆಂಗಳೂರಿನ ನ್ಯೂ ಹೊರೈಜನ್ ಕಾಲೇಜಿನ ಮೂವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಪಾಕ್‌ ಪರ ಘೋಷಣೆ ಕೂಗಿದ್ದಾರೆ.

ಪಾಕ್‌ ಪರ ಘೋಷಣೆ ಕೂಗಿದ ಬೆಂಗಳೂರಿನ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು

ಪಾಕ್​ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳು

ಬೆಂಗಳೂರು: ನಗರದ ನ್ಯೂ ಹೊರೈಜನ್ ಕಾಲೇಜಿನ ಮೂವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು    (Engineering Students) ಪಾಕ್‌ ಪರ ಘೋಷಣೆ ಕೂಗಿದ್ದಾರೆ. ಇಂಜಿನಿಯರಿಂಗ್‌ ಮೊದಲ ವರ್ಷದ ಆರ್ಯನ್, ದಿನಕರ್‌, ರಿಯಾ ರವಿಚಂದ್ರ ಕಾಮೇಡ್ಕರ್‌ ಉದ್ಧಟತನ ಮೆರೆದಿದ್ದಾರೆ. ಈ ವೇಳೆ ಇತರೆ ವಿದ್ಯಾರ್ಥಿಗಳು ಮೂವರನ್ನು ಥಳಿಸಲು ಮುಂದಾಗಿದ್ದಾರೆ. ಕೂಡಲೇ ವಿದ್ಯಾರ್ಥಿಗಳು ಉಳಿದ ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಿದ್ದಾರೆ.

ವಿದ್ಯಾರ್ಥಿಗಳ ವಿರುದ್ಧ ಮಾರತ್‌ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಮಾಷೆ ಮಾಡಲು ಹೀಗೆ ಮಾಡಿದ್ದೇವೆ ಎಂದಿದ್ದಾರೆ. ಆದರೂ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.