ಬೆಂಗಳೂರು: ಪಾಸಿಟಿವ್ ದರ ಶೇಕಡಾ 5ಕ್ಕೆ ಬಂದ್ರೆ ಮಾತ್ರ ಲಾಕ್‌ಡೌನ್ ಸಡಿಲಿಕೆ ಬಗ್ಗೆ ನಿರ್ಧಾರ ಮಾಡ್ತೇವೆ ಅಂತಾ ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ.

ಜೂನ್ 14ರ ಬಳಿಕ ಲಾಕ್​ಡೌನ್​ ಸಡಿಲಿಕೆ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮಗಳ ಜೊತೆ ಪ್ರತಿಕ್ರಿಯಿಸಿದ ಅವರು.. ಯಾವ್ಯಾವ ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ಶೇಕಡಾ 5ಕ್ಕೆ ಬರುತ್ತದೋ ಅಲ್ಲಿ ಸಡಿಲಿಕೆ ಬಗ್ಗೆ ನಿರ್ಧಾರ ಮಾಡುತ್ತೇವೆ.

ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚಿಸಿ ಮುಂದೆ ನಿರ್ಧಾರ ಮಾಡುತ್ತೇವೆ. ಲಾಕ್‌ಡೌನ್ ಮುಗಿಯಲು ಮೂರ್ನಾಲ್ಕು ದಿನಗಳು ಬಾಕಿ ಇರುವಾಗ ಕುಳಿತು ನಿರ್ಧಾರ ಮಾಡ್ತೇವೆ ಎಂದಿದ್ದಾರೆ.

The post ಪಾಸಿಟಿವ್ ರೇಟ್ ಶೇ.5ಕ್ಕೆ ಬಂದ್ರೆ ಮಾತ್ರ ಲಾಕ್‌ಡೌನ್ ಸಡಿಲಿಕೆ appeared first on News First Kannada.

Source: newsfirstlive.com

Source link