
ಸಾಂದರ್ಭಿಕ ಚಿತ್ರ
ಈ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಾದ್ರೆ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಬಹುದು, ಕನಿಷ್ಠ 10 ವರ್ಷ ಶಿಕ್ಷೆ ವಿಧಿಸುವ ಅವಕಾಶ ಇದೆ. ಈ ಸೆಕ್ಷನ್ ಅಡಿಯಲ್ಲಿ ಕೇಸ್ ಆದ್ರೆ ತ್ವರಿತವಾಗಿ ಜಾಮೀನು ಸಹ ಸಿಗಲ್ಲ.
ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾದ ಸರ್ಕಾರಿ ಅಧಿಕಾರಿಗಳಿಗೆ ದೊಡ್ಡ ಸಂಕಷ್ಟ ಎದುರಾಗಲಿದೆ. ಸಿಐಡಿ ಪೊಲೀಸರು ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 409 ಸೇರ್ಪಡೆ ಮಾಡಿದ್ದಾರೆ. ಐಪಿಸಿ 409 (Criminal Breach of Trust by government servant) ಸೆಕ್ಷನ್ ಸೇರ್ಪಡೆಯಾಗಿದೆ. ಸರ್ಕಾರಿ ಕೆಲಸವನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರಿ ಅಧಿಕಾರಿಯಿಂದ ನಂಬಿಕೆದ್ರೋಹ ಆದ್ರೆ ಈ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಲಾಗುತ್ತೆ.
ಈ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಾದ್ರೆ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಬಹುದು, ಕನಿಷ್ಠ 10 ವರ್ಷ ಶಿಕ್ಷೆ ವಿಧಿಸುವ ಅವಕಾಶ ಇದೆ. ಈ ಸೆಕ್ಷನ್ ಅಡಿಯಲ್ಲಿ ಕೇಸ್ ಆದ್ರೆ ತ್ವರಿತವಾಗಿ ಜಾಮೀನು ಸಹ ಸಿಗಲ್ಲ. ಇದುವರೆಗೂ ಸಿಐಡಿ ಅಧಿಕಾರಿಗಳು ಡಿವೈಎಸ್ಪಿ, ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ಕೆಲ ಹಂತದ ಸಿಬ್ಬಂದಿಯನ್ನು ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣದಲ್ಲಿ ಬಂಧಿಸಲಾಗಿದೆ. ಸುಮಾರು 20ಕ್ಕೂ ಅಧಿಕ ಸರ್ಕಾರಿ ನೌಕರ ಸಿಬ್ಬಂದಿಯನ್ನು ಅರೆಸ್ಟ್ ಮಾಡಲಾಗಿದೆ. ಈಗ ಬಂಧಿತರೆಲ್ಲರಿಗೂ ಜಾಮೀನು ಸಿಗೋದು ಕಠಿಣ ಆಗಲಿದೆ. ಕೆಳ ಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಗೋದು ಡೌಟು. ಈ ಸೆಕ್ಷನ್ ಸೇರ್ಪಡೆ ಆಗಿರುವುದರಿಂದ ಹಲವು ಸರ್ಕಾರಿ ಅಧಿಕಾರಿಗಳಿಗೆ ನಡುಕ ಹುಟ್ಟಿದೆ. ಯಾರೇ ಸರ್ಕಾರಿ ನೌಕರ ಬಂಧನ ಆದ್ರೂ 409 ಅಡಿಯಲ್ಲಿ ಕೇಸ್ ದಾಖಲಿಸಲು ಸಿಐಡಿ ನಿರ್ಧಾರ ಮಾಡಿದೆ. ಇಂತ ಪ್ರಕರಣ ಮರುಕಳಿಸದಂತೆ ಈ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಲಾಗುತ್ತೆ.