ಪುಣೆಯಲ್ಲಿ 270 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಇನ್​ಫೆಕ್ಷನ್

ಪುಣೆಯಲ್ಲಿ 270 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಇನ್​ಫೆಕ್ಷನ್

ಪುಣೆ: ಕೊರೊನಾ ಆರ್ಭಟದ ನಡುವೆ ದೇಶಾದ್ಯಂತ ಬ್ಲ್ಯಾಕ್ ಫಂಗಸ್ ಭೀತಿ ಹೇಚ್ಚಾಗಿದೆ. ಇದೀಗ ಪುಣೆಯಲ್ಲಿ ಸುಮಾರು 270 ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸೋಂಕು ಮೆದುಳು ಮತ್ತು ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ಮಧುಮೇಹಿಗಳು ಹಾಗೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಮಾರಣಾಂತಿಕವಾಗಬಹುದು ಎಂದು ತಿಳಿಸಲಾಗಿದೆ. ಕೊರೊನಾದಿಂದ ಚೇತರಿಸಿಕೊಂಡವರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗುತ್ತಿದೆ.

ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಈವರೆಗೆ ಸುಮಾರು 270 ಪ್ರಕರಣಗಳು ವರದಿಯಾಗಿವೆ ಎಂದು ಪುಣೆ ವಿಭಾಗದ ವಿಭಾಗೀಯ ಆಯುಕ್ತ ಸೌರಭ್ ರಾವ್ ತಿಳಿಸಿದ್ದಾರೆ.

The post ಪುಣೆಯಲ್ಲಿ 270 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಇನ್​ಫೆಕ್ಷನ್ appeared first on News First Kannada.

Source: newsfirstlive.com

Source link