ಬೀದರ್: ಪುತ್ರನ ಮದುವೆಯ ಆಮಂತ್ರಣ ಪತ್ರಿಕೆ ನೀಡಲು ಹೋದ ದಂಪತಿಗಳು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ
ಭಾಲ್ಕಿ ತಾಲೂಕಿನ ಸೇವಾನಗರ ಬಳಿ ನಡೆದಿದೆ.
ಭಾಲ್ಕಿಯ ಕಾಂಗ್ರೆಸ್ ಪಕ್ಷದ ಮುಖಂಡ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಸೂರ್ಯಕಾಂತ ಪಾಟೀಲ್ (50) ಹಾಗೂ ಜಯಶ್ರೀ ಪಾಟೀಲ್ (45) ಮೃತ ದುರ್ದೈವಿಗಳು. ಬೀದರ್ ನಲ್ಲಿ ಸಂಬಂಧಿಕರಿಗೆ ಮದುವೆಯ ಕಾರ್ಡ್ ನೀಡಿ ವಾಪಸಾಗುವಾಗ ಅಪಘಾತ ಸಂಭವಿಸಿದ್ದು, ಮದುವೆ ಸಂಭ್ರಮದ ಖುಷಿಯಲ್ಲಿದ್ದ ಕುಟುಂಬಸ್ಥರಿಗೆ ಬಿಗ್ ಶಾಕ್ ಎದುರಾಗಿದೆ.
ಬೀದರ್ ನಿಂದ ಭಾಲ್ಕಿಗೆ ವಾಪಸಾಗುವಾಗ ತಡರಾತ್ರಿ ಕಾರು ಪಲ್ಟಿಯಾಗಿದ್ದು, ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೇ ತಿಂಗಳ 26 ರಂದು ಪುತ್ರ ಸಾಯಿನಾಥ ಸೂರ್ಯಕಾಂತ ಪಾಟೀಲ್ ಮದುವೆ ನಡೆಯಬೇಕಿತ್ತು. ಘಟನಾ ಸ್ಥಳಕ್ಕೆ ಶಾಸಕ ಈಶ್ವರ್ ಖಂಡ್ರೆ ಹಾಗೂ ಪೊಲೀಸರ ಭೇಟಿ ನೀಡಿದ್ದಾರೆ. ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.