‘ಪುನೀತ್​ಗೆ ಕೊಟ್ಟ ಮಾತು ಉಳಿಸಿಕೊಳ್ತೀನಿ’; ಪುನೀತ ನಮನ ಕಾರ್ಯಕ್ರಮದಲ್ಲಿ ವಿಶಾಲ್ | Tamil actor Vishal talks about Puneeth Rajkumar in Puneetha Namana program in Bengaluru


ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಇಡೀ ದಕ್ಷಿಣ ಭಾರತ ಚಿತ್ರರಂಗ ಒಂದೆಡೆ ಸೇರಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಪುನೀತ ನಮನ’ (Puneeth Namana) ಕಾರ್ಯಕ್ರಮ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಕಾಲಿವುಡ್​ ನಟ ವಿಶಾಲ್​ (Actor Vishal) ಅವರು ಆಗಮಿಸಿದ್ದಾರೆ. ಈ ಕಾರ್ಯಕ್ರಮ ಆರಂಭ ಆಗುವುದಕ್ಕೂ ಮುನ್ನ ಮಾಧ್ಯಮಗಳ ಜೊತೆ ವಿಶಾಲ್​ ಮಾತನಾಡಿದರು. ‘ನನ್ನ ಸ್ನೇಹಿತ ಪುನೀತ್​ ಒಳ್ಳೆಯ ನಟ, ವ್ಯಕ್ತಿ ಆಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಸಹೋದರನಾಗಿ ಪುನೀತ್​ಗೆ ಪ್ರಾಮಿಸ್​ ಮಾಡುತ್ತಿದ್ದೇನೆ. ನಾನು ಹೇಳಿದ ಮಾತನ್ನು ನಡೆಸಿಕೊಡುತ್ತೇನೆ. ಅವರು ಬದುಕಿದ್ದಾಗ ತಾವು ಮಾಡಿದ ಸಮಾಜಸೇವೆಯನ್ನು ಎಲ್ಲಿಯೂ ಹೇಳಿಕೊಂಡಿಲ್ಲ. ನೀವು ಮೃತಪಟ್ಟ ನಂತರ ನಿಮ್ಮ ಕಾರ್ಯಗಳ ಬಗ್ಗೆ ಇಡೀ ದೇಶಕ್ಕೆ ತಿಳಿಯಿತು. ನೀವು ಮಾಡುತ್ತಿದ್ದ ಕಾರ್ಯವನ್ನು ನಾನು ಮುಂದುವರಿಸುತ್ತೇನೆ’ ಎಂದು ವಿಶಾಲ್​ ಹೇಳಿದರು.

‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಭಾಗಿ ಆಗಿದ್ದಾರೆ. ಡಾ. ರಾಜ್​ಕುಮಾರ್​ ಕುಟುಂಬದ ಎಲ್ಲರೂ ಹಾಜರಿದ್ದು, ಅಪ್ಪುಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಕೇವಲ ಸೆಲೆಬ್ರಿಟಿಗಳು ಮತ್ತು ಗಣ್ಯರಿಗೆ ಈ ಕಾರ್ಯಕ್ರಮಕ್ಕೆ ಪ್ರವೇಶ ನೀಡಲಾಗಿದೆ. ಅಭಿಮಾನಿಗಳಿಗೆ ಅವಕಾಶ ನೀಡಲಾಗಿಲ್ಲ.

ಇದನ್ನೂ ಓದಿ:

Ashwini Puneeth: ನಿಂತಿಲ್ಲ ಅಶ್ವಿನಿ, ಶಿವಣ್ಣನ​ ಕಣ್ಣೀರು; ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅತ್ತ ಪುನೀತ್​ ಕುಟುಂಬ

Indrajit Lankesh: ಪುನೀತ್​ ಜನ್ಮದಿನವನ್ನು ‘ಅಪ್ಪು ದಿನಾಚರಣೆ’ಯನ್ನಾಗಿ ಆಚರಿಸಿ; ಇಂದ್ರಜಿತ್​ ಲಂಕೇಶ್​

TV9 Kannada


Leave a Reply

Your email address will not be published. Required fields are marked *