ಹಾವೇರಿ: ಕನ್ನಡಿಗರ ಪ್ರೀತಿಯ ನಟ ಪುನೀತ್ ರಾಜ್ಕುಮಾರ್ ನಮ್ಮನ್ನು ಅಗಲಿ 9 ದಿನಗಳು ಕಳೆದಿದೆ. ಸಾವಿರಾರು ಅಭಿಮಾನಿಗಳು ಕಂಠೀರವ ಸ್ಟುಡಿಯೋಗೆ ಆಗಮಿಸಿ ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಈ ನಡುವೆ ಅಪ್ಪು ಅಗಲಿಕೆ ನೋವಿನಲ್ಲಿರೋ ಗ್ರಾಮಸ್ಥರು ಹಬ್ಬವನ್ನೇ ರದ್ದು ಮಾಡಿರೋ ಘಟನೆ ಹಾವೇರಿ ತಾಲೂಕಿನ ಕುಳೇನೂರು ಗ್ರಾಮದಲ್ಲಿ ನಡೆದಿದೆ.
ಅಪ್ಪುವಿಗಾಗಿ ಗ್ರಾಮಸ್ಥರು ಪ್ರತಿ ವರ್ಷ ವಿಜೃಂಭಣೆಯಿಂದ ನಡೆಸಿಕೊಂಡು ಬರುತ್ತಿದ್ದ ನಡೆಯುತ್ತಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸೋ ಹಬ್ಬವನ್ನು ಸ್ಥಗಿತಗೊಳಿಸಿ ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾರೆ. ಹತ್ತು ನಿಮಿಷಗಳ ಕಾಲ ಮೌನಾಚಾರಣೆ ಮಾಡಿ ಅಪ್ಪು ಆತ್ಮಕ್ಕೆ ಶಾಂತಿ ಸಿಗಲಿ ಎಂದು ಗ್ರಾಮಸ್ಥರು ಪ್ರಾರ್ಥನೆ ಮಾಡಿದ್ದಾರೆ.
ಪ್ರತಿ ವರ್ಷ ದೀಪಾವಳಿ ಹಬ್ಬದಂದೇ ಗ್ರಾಮದಲ್ಲಿ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯನ್ನು ಗ್ರಾಮಸ್ಥರು ಆಯೋಜಿಸುತ್ತಿದ್ದರು. ಆದರೆ ಅಪ್ಪು ನಿಧನರಾದ ಹಿನ್ನೆಲೆಯಲ್ಲಿ ಮಿಡಿದ ಅಪ್ಪಟ ರೈತರ ಮನಗಳು, ಅಪ್ಪು ಅಪ್ಪು ಎಂದು ಘೋಷಣೆ ಕೂಗಿ ಅಭಿಮಾನ ಮೆರೆದರು. ಅಲ್ಲದೇ ಗ್ರಾಮದ ಬಸವೇಶ್ವರ ದೇವಸ್ಥಾನದ ಎದುರು ಅಪ್ಪು ಭಾವಚಿತ್ರ ಹಿಡಿದು ಶೃದ್ಧಾಂಜಲಿ ಅರ್ಪಿಸಿದ್ದಾರೆ.