ಪುನೀತ್​ ಸಮಾಧಿಗೆ ಪ್ರತಿದಿನ 20 ಸಾವಿರ ಮಂದಿ ಭೇಟಿ; ಕಂಠೀರವ ಸ್ಟುಡಿಯೋದಲ್ಲಿ ಈಗ ಹೇಗಿದೆ ಪರಿಸ್ಥಿತಿ? | More than 20 thousand fans visiting Puneeth Rajkumar samadhi everyday


ಪುನೀತ್​ ರಾಜ್​ಕುಮಾರ್​ ಅವರ ಮೇಲೆ ಜನರು ಇಟ್ಟಿದ್ದ ಅಭಿಮಾನಕ್ಕೆ ಸಾಟಿಯೇ ಇಲ್ಲ. ಅವರು ನಿಧನರಾದ ಬಳಿಕ 25 ಲಕ್ಷಕ್ಕೂ ಅಧಿಕ ಜನರು ಬೆಂಗಳೂರಿನ ಕಂಠೀರವ ಸ್ಟೇಡಿಯಂಗೆ ಬಂದು ಅಂತಿಮ ದರ್ಶನ ಪಡೆದಿದ್ದರು. ಈಗ ಅಪ್ಪು ಸಮಾಧಿಗೆ ಭೇಟಿ ನೀಡುವವರ ಸಂಖ್ಯೆ ಕೂಡ ದೊಡ್ಡದಿದೆ. ಪ್ರತಿ ದಿನ 20 ಸಾವಿರಕ್ಕೂ ಅಧಿಕ ಜನರು ಕಂಠೀರವ ಸ್ಟುಡಿಯೋ ಆವರಣಕ್ಕೆ ಬಂದು ಪುನೀತ್​ ರಾಜ್​ಕುಮಾರ್​ ಸಮಾಧಿಗೆ ನಮನ ಸಲ್ಲಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಮಳೆಯ ಹಾವಳಿ ಹೆಚ್ಚಾಗಿದೆ. ಹಾಗಿದ್ದರೂ ಕೂಡ ಅಭಿಮಾನಿಗಳು ಬಗ್ಗುತ್ತಿಲ್ಲ. ಮಳೆಯ ನಡುವೆಯೂ ಸಾಲಿನಲ್ಲಿ ನಿಂತು ತಮ್ಮ ನೆಚ್ಚಿನ ನಟನ ಸಮಾಧಿಗೆ ಸಮಸ್ಕರಿಸುತ್ತಿದ್ದಾರೆ. ಮಕ್ಕಳು, ಮಹಿಳೆಯರು, ವೃದ್ಧರು ಕೂಡ ಬಂದು ನಮನ ಸಲ್ಲಿಸುತ್ತಿದ್ದಾರೆ. ಎಲ್ಲರೂ ಶಾಂತಿಯುತವಾಗಿ ಸಮಾಧಿ ದರ್ಶನ ಪಡೆಯಲು ಪೊಲೀಸರು ಸೂಕ್ತ ಭದ್ರತೆ ಕಲ್ಪಿಸಿದ್ದಾರೆ. ಕನ್ನಡ ಚಿತ್ರರಂಗ ಮತ್ತು ಪರಭಾಷೆಯ ಅನೇಕ ಸೆಲೆಬ್ರಿಟಿಗಳು ಸಹ ಭೇಟಿ ನೀಡುತ್ತಿದ್ದಾರೆ.

ಇದನ್ನೂ ಓದಿ:

ಪುನೀತ್​ ಸಾವಿನ ಬಗ್ಗೆ ಮೂಡಿದೆ ಅನುಮಾನ; ವೈದ್ಯರ ವಿರುದ್ಧ ದೂರು ದಾಖಲು

ರಸ್ತೆ, ಪಾರ್ಕ್​, ಮೈದಾನಕ್ಕೆ ಪುನೀತ್​ ಹೆಸರು; ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ ಹೇಳೋದೇನು?

TV9 Kannada


Leave a Reply

Your email address will not be published. Required fields are marked *