ಪುನೀತ್​ ಸಮಾಧಿ ಬಳಿ ಬಂದು ಹಾಡು ಹೇಳಿದ ಮಕ್ಕಳು; ಪುಟ್ಟ ಹೃದಯಗಳಿಗೆ ಅಪ್ಪು ಎಂದರೆ ಪಂಚಪ್ರಾಣ | Children visit Puneeth Rajkumar samadhi and remember Appu by singing his songs


ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದವರು ಪುನೀತ್​ ರಾಜ್​ಕುಮಾರ್​. ಹೃದಯಾಘಾತದಿಂದ ಸಡನ್​ ಆಗಿ ಅವರು ಇಹಲೋಕ ತ್ಯಜಿಸಿದ ಬಳಿಕ ಅಪಾರ ಸಂಖ್ಯೆಯ ಅಭಿಮಾನಿ ಬಳಗಕ್ಕೆ ತೀವ್ರ ನೋವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಚಿಕ್ಕ ಮಕ್ಕಳು ಸಂಕಟಪಡುತ್ತಿದ್ದಾರೆ. ಪುನೀತ್​ ಅವರ ಸಿನಿಮಾಗಳನ್ನು ಎಲ್ಲ ವರ್ಗದ ಪ್ರೇಕ್ಷಕರು ಇಷ್ಟಪಡುತ್ತಿದ್ದರು. ಮಕ್ಕಳು ಕೂಡ ಅಪ್ಪು ಅಭಿನಯವನ್ನು ಮನಸಾರೆ ಮೆಚ್ಚಿಕೊಂಡಿದ್ದರು. ಆದರೆ ಈಗ ಪುನೀತ್​ ಇಲ್ಲ ಎಂಬ ಕಹಿ ಸತ್ಯದಿಂದ ಪುಟಾಣಿಗಳಿಗೆ ನೋವಾಗಿದೆ.

ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಪ್ರತಿ ದಿನ ಭಾರಿ ಸಂಖ್ಯೆಯ ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ. ಪೋಷಕರ ಜೊತೆ ಮಕ್ಕಳು ಕೂಡ ಸರದಿ ಸಾಲಿನಲ್ಲಿ ಬಂದು ಅಪ್ಪು ಸಮಾಧಿಗೆ ನಮಿಸುತ್ತಿದ್ದಾರೆ. ಸಮಾಧಿ ಎದುರು ಪುನೀತ್​ ಸಿನಿಮಾಗಳ ಹಾಡುಗಳನ್ನು ಹೇಳಿ ನಮನ ಸಲ್ಲಿಸಲಾಗುತ್ತಿದೆ. ಇಷ್ಟೆಲ್ಲ ಜನರ ಪ್ರೀತಿ ಗಳಿಸಿದ್ದ ಪುನೀತ್​ ಅವರು ಅಕಾಲಿಕ ಮರಣ ಹೊಂದಿದ್ದನ್ನು ಸಹಿಸುವುದಾದರೂ ಹೇಗೆ?

ಇದನ್ನೂ ಓದಿ:

ಅಪ್ಪು ಸಮಾಧಿ ಬಳಿ ಮದುವೆ ಆಗೋರಿಗೆ ರಾಜ್​ ಕುಟುಂಬದಿಂದ ಒಂದು ಕಂಡೀಷನ್​; ಇದನ್ನು ಪಾಲಿಸಲೇಬೇಕು

ಅಪ್ಪು ಮೇಲೆ ಜನರಿಟ್ಟ ಅಭಿಮಾನಕ್ಕೆ ಸಾಟಿ ಇಲ್ಲ; ಪುನೀತ್​ ಸಮಾಧಿ ಬಳಿ ಜನಸಾಗರ ಇನ್ನೂ ಕಮ್ಮಿ ಆಗಿಲ್ಲ

TV9 Kannada


Leave a Reply

Your email address will not be published.