ಪುನೀತ್ ಸಾವು; BBMP ಆಯುಕ್ತರಿಗೆ ಪತ್ರ ಬರೆದ ಅಶ್ವಿನಿ ಪುನೀತ್ ರಾಜ್​​ಕುಮಾರ್


ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​ ಗುಪ್ತಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.

ಆಯುಕ್ತರಿಗೆ ಪತ್ರ ಬರೆದಿರುವ ಅವರು.. ಪುನೀತ್ ರಾಜ್‍ಕುಮಾರ್ ಆಗಲಿಕೆ ನಮಗಷ್ಟೇ ಅಲ್ಲದೇ ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ಪುನೀತ್ ರಾಜ್‍ಕುಮಾರ್ ಅವರು ವಿಶ್ವದಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ನಮ್ಮ ನೋವನ್ನು ಒಳಗಿಟ್ಟುಕೊಂಡು ಅವರ ಸಕಲ ಗೌರವಗಳೊಂದಿಗೆ ಕಳುಹಿಸಿಕೊಡುವುದು ಅನಿವಾರ್ಯತೆಯಾಗಿತ್ತು.

ಇಂತಹ ಸಂದರ್ಭದಲ್ಲಿ ತಾವು ನಮಗೆ ಬೆಂಬಲವಾಗಿ ನಿಂತಿದ್ದೀರಿ‌. ಲಕ್ಷಾಂತರ ಅಭಿಮಾನಿಗಳಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಿದಷ್ಟೇ ಅಲ್ಲದೇ ಅಂತ್ಯ ಸಂಸ್ಕಾರ ಸಂಪೂರ್ಣವಾಗುವವರೆಗೂ ಜೊತೆಗಿದ್ದು ಧೈರ್ಯ ನೀಡಿದ್ದೀರಿ. ಮೂರು ದಿನಗಳ ಕಾಲ ಯಾವುದೇ ಅಹಿತಕರ ಘಟನೆ ನಡೆಯದಂತೆ ನೀವು ಕೈಗೊಂಡ ಕ್ರಮಗಳಿಂದ ನಾವು ಅವರಿಗೊಂದು ಸೂಕ್ತವಾದ ವಿದಾಯ ಹೇಳಲು ಸಾಧ್ಯವಾಗಿದೆ. ನಿಮ್ಮ ಈ ಸಹಕಾರಕ್ಕೆ ನಮ್ಮ ಇಡೀ ಕುಟುಂಬ ಮತ್ತು ಎಲ್ಲಾ ಅಭಿಮಾನಿಗಳ ಪರವಾಗಿ ಹೃತ್ಪೂರ್ಪಕ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಪ್ಪು ಸಾವು: ಗೃಹ ಸಚಿವರಿಗೆ ಪತ್ರ ಬರೆದ ಅಶ್ವಿನಿ ಪುನೀತ್ ರಾಜ್​​ಕುಮಾರ್

 

News First Live Kannada


Leave a Reply

Your email address will not be published.